ದೇಶ

ಮಂಕಿಪಾಕ್ಸ್ ನಿರ್ವಹಣೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ

Lingaraj Badiger

ನವದೆಹಲಿ: ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಯುಎಇಯಿಂದ ಹಿಂದಿರುಗಿದ ಕೇರಳ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಇಡೀ ದೇಶದಲ್ಲೇ ಮೊದಲ ಮಂಕಿಪಾಕ್ಸ್  ಪ್ರಕರಣ ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದರು. 

ರೋಗಿಯು ಜುಲೈ 12 ರಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದರು.

ಮಾರ್ಗಸೂಚಿಗಳು

  • ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ
  • ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬಾರದು
  • ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸಸ್ತನಿಗಳು ಸೇರಿದಂತೆ ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕದಿಂದ ದೂರವಿರಬೇಕು
  • ಕಾಡು ಪ್ರಾಣಿಗಳ ಮಾಂಸವನ್ನು ತಿನ್ನಬಾರದು
  • ಆಫ್ರಿಕಾ ಸೇರಿದಂತೆ ಇತರ ದೇಶಗಳಲ್ಲಿ ಕಾಡು ಪ್ರಾಣಿಗಳಿಂದ ಉತ್ಪಾದಿಸಿದ ಉತ್ಪನ್ನಗಳಾದ ಕ್ರೀಮ್‌ ಲೋಷನ್‍ಗಳನ್ನು ಬಳಸಬಾರದು ಮತ್ತು ತರಬಾರದು
SCROLL FOR NEXT