ಬೆಂಗಳೂರು ಐಐಎಸ್ ಸಿ (ಸಂಗ್ರಹ ಚಿತ್ರ) 
ದೇಶ

ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022; ಮದ್ರಾಸ್ ಗೆ ಅಗ್ರಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ!

ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022 ಪ್ರಕಟವಾಗಿದ್ದು, ಮದ್ರಾಸ್ ಐಐಟಿ ಅಗ್ರ ಸ್ಥಾನ ಮತ್ತು ಬೆಂಗಳೂರು ಐಐಎಸ್ಸಿ 2ನೇ ಸ್ಥಾನದಲ್ಲಿ ಮುಂದುವರೆದಿವೆ.

ನವದೆಹಲಿ: ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022 (India Rankings 2022) ಪ್ರಕಟವಾಗಿದ್ದು, ಮದ್ರಾಸ್ ಐಐಟಿ ಅಗ್ರ ಸ್ಥಾನ ಮತ್ತು ಬೆಂಗಳೂರು ಐಐಎಸ್ಸಿ 2ನೇ ಸ್ಥಾನದಲ್ಲಿ ಮುಂದುವರೆದಿವೆ.

ಹೌದು.. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್, ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ 2022 ರ ಭಾರತ ಶ್ರೇಯಾಂಕಗಳಲ್ಲಿ ಅಗ್ರಸ್ಥಾನದಲ್ಲಿದ್ದು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು ಮತ್ತು ಐಐಟಿ ಬಾಂಬೆ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿವೆ.

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕಗಳು 2022 ರಲ್ಲಿ ಉನ್ನತ ವಿಶ್ವವಿದ್ಯಾಲಯ ಎಂದು ಹೆಸರಿಸಲ್ಪಟ್ಟಿದೆ. ಉಳಿದಂತೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳನ್ನು ಗಳಿಸಿವೆ.

2022 ರ ಶ್ರೇಯಾಂಕವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಬಿಡುಗಡೆ ಮಾಡಿದ್ದು, ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಪ್ರಕಾರ, ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಸತತ ನಾಲ್ಕನೇ ವರ್ಷವೂ ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ರಸ್ಥಾನವನ್ನು ಗಳಿಸಿದರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಅತ್ಯುತ್ತಮ ವಿಶ್ವವಿದ್ಯಾಲಯವಾಗಿದೆ. 

ಒಟ್ಟಾರೆ ವಿಭಾಗದಲ್ಲಿ ಐಐಟಿ ಮದ್ರಾಸ್ ನಂತರದ ಸ್ಥಾನದಲ್ಲಿ ಐಐಎಸ್‌ಸಿ ಬೆಂಗಳೂರು ಎರಡನೇ ಸ್ಥಾನದಲ್ಲಿದ್ದರೆ, ಐಐಟಿ ಬಾಂಬೆ ಮೂರನೇ ಸ್ಥಾನದಲ್ಲಿದೆ. ವಿಶ್ವವಿದ್ಯಾನಿಲಯಗಳ ಪೈಕಿ, IISc ಬೆಂಗಳೂರು ನಂತರ JNU ಎರಡನೇ ಸ್ಥಾನದಲ್ಲಿದೆ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮೂರನೇ ಸ್ಥಾನದಲ್ಲಿದೆ. ಐಐಟಿ ಮದ್ರಾಸ್ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು ನಂತರ ಐಐಟಿ ದೆಹಲಿ ಮತ್ತು ಐಐಟಿ ಬಾಂಬೆ.

ಫಾರ್ಮಸಿ ಸಂಸ್ಥೆಗಳಲ್ಲಿ ಜಾಮಿಯಾ ಹಮ್ದರ್ದ್ ಉನ್ನತ ಶ್ರೇಣಿಯನ್ನು ಪಡೆದುಕೊಂಡಿದೆ. ಹೈದರಾಬಾದ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಎಜುಕೇಶನ್ ಅಂಡ್ ರಿಸರ್ಚ್ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದಿದ್ದರೆ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯ ಮೂರನೇ ಸ್ಥಾನ ಪಡೆದಿದೆ. ವರ್ಗದಲ್ಲಿರುವ ಹತ್ತು ಅತ್ಯುತ್ತಮ ಕಾಲೇಜುಗಳಲ್ಲಿ ಐದು ದೆಹಲಿಯಿಂದ ಬಂದಿದ್ದಾಗಿದ್ದು, ಮಿರಾಂಡಾ ಹೌಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹಿಂದೂ ಕಾಲೇಜು ಎರಡನೇ ರ್ಯಾಂಕ್ ಪಡೆದಿದ್ದು, ಚೆನ್ನೈನ ಪ್ರೆಸಿಡೆನ್ಸಿ ಕಾಲೇಜು ಮೂರನೇ ಸ್ಥಾನದಲ್ಲಿದೆ. AIIMS ದೆಹಲಿಯು ಅತ್ಯುತ್ತಮ ವೈದ್ಯಕೀಯ ಕಾಲೇಜು ವಿಭಾಗದಲ್ಲಿ PGIMER, ಚಂಡೀಗಢ ಮತ್ತು CMC, ವೆಲ್ಲೂರ್ ನಂತರದ ಸ್ಥಾನದಲ್ಲಿವೆ. ಐಐಎಂ ಅಹಮದಾಬಾದ್ ದೇಶದ ಅತ್ಯುತ್ತಮ ನಿರ್ವಹಣಾ ಸಂಸ್ಥೆಯಾಗಿದ್ದು, ಐಐಎಂ ಬೆಂಗಳೂರು ಮತ್ತು ಐಐಎಂ ಕೋಲ್ಕತ್ತಾ ನಂತರದ ಸ್ಥಾನದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT