ಯಶ್ವಂತ್ ಸಿನ್ಹಾ ಮತ್ತು ಅರವಿಂದ್ ಕೇಜ್ರಿವಾಲ್ 
ದೇಶ

ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ

ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ದೆಹಲಿ ಮತ್ತು ಪಂಜಾಬ್ ನ ಆಢಳಿತಾರೂಢ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ದೆಹಲಿ ಮತ್ತು ಪಂಜಾಬ್ ನ ಆಢಳಿತಾರೂಢ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಲಿದೆ ಎಂದು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಶನಿವಾರ ಪಕ್ಷದ ರಾಜಕೀಯ ಸಲಹಾ ಸಮಿತಿ ಸಭೆಯ ನಂತರ ತಿಳಿಸಿದ್ದಾರೆ. ಸಿನ್ಹಾ ಅವರು ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ ಆಯ್ಕೆಯಾದ ಅಭ್ಯರ್ಥಿ ದ್ರೌಪದಿ ಮುರ್ಮು ಅವರೊಂದಿಗೆ ದೇಶದ ಉನ್ನತ ಸಾಂವಿಧಾನಿಕ ಹುದ್ದೆಗೆ ಕಣದಲ್ಲಿದ್ದಾರೆ.

"ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ಆಪ್ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತೇವೆ ಎಂದು ಸಿಂಗ್ ಹೇಳಿದರು.

ಸಭೆಯಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ಪಂಜಾಬ್ ಸಂಸದ ರಾಘವ್ ಚಡ್ಡಾ, ಶಾಸಕ ಅತಿಶಿ ಮತ್ತು ಪಿಎಸಿಯ ಇತರ ಸದಸ್ಯರು ಭಾಗವಹಿಸಿದ್ದರು.

ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದ್ದು, ಅಗತ್ಯ ಬಿದ್ದರೆ ಮತ ಎಣಿಕೆ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

ಇನ್ನು ದೆಹಲಿ ಮತ್ತು ಪಂಜಾಬ್ ಎಂಬ ಎರಡು ರಾಜ್ಯಗಳಲ್ಲಿ ಸರ್ಕಾರಗಳನ್ನು ಹೊಂದಿರುವ ಏಕೈಕ ಬಿಜೆಪಿಯೇತರ, ಕಾಂಗ್ರೆಸ್ಸೇತರ ಪಕ್ಷ ಎಎಪಿ. ಇದು ದೆಹಲಿಯ ಮೂವರು ಸೇರಿದಂತೆ ಎರಡು ರಾಜ್ಯಗಳ 10 ರಾಜ್ಯಸಭಾ ಸಂಸದರನ್ನು ಹೊಂದಿದೆ. ಅಲ್ಲದೆ, ಪಕ್ಷವು ಪಂಜಾಬ್‌ನಲ್ಲಿ 92, ದೆಹಲಿಯಲ್ಲಿ 62 ಮತ್ತು ಗೋವಾದಲ್ಲಿ ಇಬ್ಬರು ಸೇರಿದಂತೆ ಒಟ್ಟು 156 ಶಾಸಕರನ್ನು ಹೊಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT