ಮಾರ್ಗರೇಟ್ ಆಳ್ವ 
ದೇಶ

ಉಪ ರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ

ಆಗಸ್ಟ್ 6ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ(Vice president election) ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ(Margaret Alva) ಅವರನ್ನು ಆಯ್ಕೆ ಮಾಡಲಾಗಿದೆ.

ನವದೆಹಲಿ: ಆಗಸ್ಟ್ 6ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ(Vice president election) ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ(Margaret Alva) ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ದೆಹಲಿಯಲ್ಲಿ ವಿಪಕ್ಷಗಳ ಸಭೆ ಮುಕ್ತಾಯ ನಂತರ ಎನ್ ಸಿಪಿ ನಾಯಕ ಶರದ್ ಪವಾರ್ ಮಾರ್ಗರೇಟ್ ಆಳ್ವ  ಅವರ ಹೆಸರನ್ನು ಘೋಷಿಸಿದರು. 

1942ರ ಏಪ್ರಿಲ್ 14ರಂದು ಮಂಗಳೂರಿನಲ್ಲಿ ಜನಿಸಿದ ಮಾರ್ಗರೇಟ್ ಆಳ್ವಾ ಗೋವಾದ 17 ನೇ ರಾಜ್ಯಪಾಲರಾಗಿ, ಗುಜರಾತ್‌ನ 23 ನೇ ಗವರ್ನರ್, ರಾಜಸ್ಥಾನದ 20 ನೇ ರಾಜ್ಯಪಾಲೆ ಮತ್ತು ಉತ್ತರಾಖಂಡದ 4 ನೇ ರಾಜ್ಯಪಾಲೆಯಾಗಿ ಆಗಸ್ಟ್ 2014ರ ಅಂತ್ಯದವರೆಗೆ ಸೇವೆ ಸಲ್ಲಿಸಿದ್ದಾರೆ. 

ಅದಕ್ಕೂ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಸಂಸದೆಯಾಗಿ ಕೇಂದ್ರ ಸಚಿವೆಯಾಗಿ ಯುಪಿಎ ಸರ್ಕಾರದಲ್ಲಿ ಸೇವೆ ಸಲ್ಲಿಸಿದ್ದರು.ಕಾಂಗ್ರೆಸ್ ನಲ್ಲಿ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಆಳ್ವಾ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದರು. ಅವರ ಅತ್ತೆ, ವೈಲೆಟ್ ಆಳ್ವ, 1960 ರ ದಶಕದಲ್ಲಿ ರಾಜ್ಯಸಭೆಯ ಉಪಾಧ್ಯಕ್ಷೆಯಾಗಿದ್ದರು.

ಮಾರ್ಗರೇಟ್ ಆಳ್ವ ಹರ್ಷ: ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದು ಒಂದು ವಿಶೇಷ ಮತ್ತು ಗೌರವವಾಗಿದೆ. ನಾನು ಈ ನಾಮನಿರ್ದೇಶನವನ್ನು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗಾಗಿ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದಗಳು ಎಂದು ಮಾರ್ಗರೇಟ್ ಆಳ್ವ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT