ಮನ್‌ಪ್ರೀತ್ ಸಿಂಗ್ ಅಯಾಲಿ 
ದೇಶ

ರಾಷ್ಟ್ರಪತಿ ಚುನಾವಣೆ: ಮತದಾನ ಬಹಿಷ್ಕರಿಸಿದ ಅಕಾಲಿ ದಳ ಶಾಸಕ ಮನ್‌ಪ್ರೀತ್ ಸಿಂಗ್ ಅಯಾಲಿ

ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು 776 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ಚುನಾವಣೆ ನಡೆಯುತ್ತಿದ್ದು, ಅಕಾಲಿದಳದ ಶಾಸಕರೊಬ್ಬರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ...

ಚಂಡೀಗಢ: ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು 776 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ಚುನಾವಣೆ ನಡೆಯುತ್ತಿದ್ದು, ಅಕಾಲಿದಳದ ಶಾಸಕರೊಬ್ಬರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಪಕ್ಷದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಅಕಾಲಿದಳದ ಶಾಸಕ ಮನ್‌ಪ್ರೀತ್ ಸಿಂಗ್ ಅಯಾಲಿ ಫೇಸ್‌ಬುಕ್ ವಿಡಿಯೋದಲ್ಲಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಮತ್ತು ರಾಷ್ಟ್ರಪತಿ ಅಭ್ಯರ್ಥಿಗಳಾದ ದ್ರೌಪದಿ ಮುರ್ಮು ಅಥವಾ ಯಶವಂತ್ ಸಿನ್ಹಾ ಅವರಿಗೆ ಮತ ಹಾಕುವುದಿಲ್ಲ ಎಂದು ಘೋಷಿಸಿದ್ದಾರೆ.

ಮನ್‌ಪ್ರೀತ್ ಸಿಂಗ್ ಅಯಾಲಿ ಅವರು “1984 ರ ಸಿಖ್ ನರಮೇಧ”, ಆಪರೇಷನ್ ಬ್ಲೂಸ್ಟಾರ್ ಮತ್ತು ಸಿಖ್ಖರ ಹಕ್ಕುಗಳ ಉಲ್ಲಂಘನೆಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ಪಂಜಾಬ್‌ನ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್‌ನಲ್ಲಿ ನನಗೆ ಯಾವುದೇ ನಂಬಿಕೆ ಇಲ್ಲ ಎಂದು ಅವರು ಹೇಳಿದ್ದಾರೆ.

ಅವರು ಬಿಜೆಪಿ ಮೇಲೆ ಹೆಚ್ಚಿನ ಭರವಸೆ ಇಟ್ಟಿದ್ದರೂ, ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಅವರು ಪಂಜಾಬ್‌ನ ಸಮಸ್ಯೆಗಳನ್ನು ಪರಿಹರಿಸಲಿಲ್ಲ. ಇದು ಸ್ವಾರ್ಥವೋ ಅಥವಾ ಇನ್ನೇನೋ ಗೊತ್ತಿಲ್ಲ. ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಕುರಿತು, ನಾಮನಿರ್ದೇಶನದ ಮೊದಲು ಸಿಖ್ ಸಮುದಾಯವನ್ನು ಸಂಪರ್ಕಿಸಲಿಲ್ಲ ಎಂದಿದ್ದಾರೆ. ಆಡಳಿತ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿರುವ ಬಗ್ಗೆಯೂ ಅವರು ಅಕಾಲಿ ನಾಯಕತ್ವವನ್ನು ಪ್ರಶ್ನಿಸಿದ್ದಾರೆ.

ಸಿಖ್ ಸಮುದಾಯದ ಭಾವನೆಗಳು, ಪಂಜಾಬ್‌ನ ಸಮಸ್ಯೆಗಳು ಮತ್ತು ನನ್ನ ಆತ್ಮಸಾಕ್ಷಿಯ ಧ್ವನಿಯನ್ನು ಆಲಿಸಿ, ನಾನು ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗೆ ಮತ ಹಾಕುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯದಿಂದ ಬಂದವರು ಮತ್ತು ಅವರೊಂದಿಗೆ ನನಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಬಿಜೆಪಿಯು ಕೇಂದ್ರದಲ್ಲಿದ್ದರೂ ಸಹ ಸಿಖ್ ಕೈದಿಗಳ ಬಿಡುಗಡೆ, ಚಂಡೀಗಢದ ಮೇಲಿನ ಪಂಜಾಬ್‌ನ ಹಕ್ಕುಗಳು ಸೇರಿದಂತೆ ಪಂಜಾಬ್‌ನ ಸಮಸ್ಯೆ, ಸಟ್ಲುಜ್ ಯಮುನಾ ಲಿಂಕ್ ಕಾಲುವೆಯ ಸಮಸ್ಯೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಅಕಾಲಿದಳ ಬೆಂಬಲ ಘೋಷಿಸಿತ್ತು. ಅಕಾಲಿದಳ ಪಕ್ಷವು ಪಂಜಾಬ್ ವಿಧಾನಸಭೆಯಲ್ಲಿ ಕೇವಲ ಮೂರು ಶಾಸಕರನ್ನು ಮತ್ತು ಲೋಕಸಭೆಯಲ್ಲಿ ಇಬ್ಬರು ಸಂಸದರನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT