ನಾಮಪತ್ರ ಸಲ್ಲಿಸಿದ ಜಗದೀಪ್ ಧಂಕರ್ 
ದೇಶ

ಉಪ ರಾಷ್ಟ್ರಪತಿ ಚುನಾವಣೆ: ಜಗದೀಪ್ ಧಂಕರ್ ನಾಮಪತ್ರ ಸಲ್ಲಿಕೆ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ!

ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಹಾಲಿ ಪಶ್ಟಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಜಗದೀಪ್ ಧಂಖರ್ ಅವರನ್ನು ಈ ಹಿಂದೆ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಉಪ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿತ್ತು. ಈ ಬಗ್ಗೆ ಸ್ವತಃ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

NDA Vice Presidential candidate Shri Jagdeep Dhankar files nomination. https://t.co/NkW45MBXHK

ಇದೀಗ ಜಗದೀಪ್ ಧಂಖರ್ ಅವರು ಉಪ ರಾಷ್ಟ್ರಪತಿ ಚುನಾವಣೆಗೆ ಅಧಿಕೃತವಾಗಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸಂಪುಟದ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಾಥ್ ನೀಡಿದ್ದರು.

ರಾಜಸ್ಥಾನದಲ್ಲಿ ಬಿಜೆಪಿಯೊಂದಿಗೆ ಸುದೀರ್ಘ ರಾಜಕೀಯ ಇತಿಹಾಸ ಹೊಂದಿದ್ದ ಧಂಕರ್ ರನ್ನು ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಕ ಮಾಡಲಾಗಿತ್ತು. ಇದೀಗ ಅವರು ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿದ್ದು, ಆಗಸ್ಟ್ 6 ರಂದು ನಡೆಯಲಿರುವ ಚುನಾವಣೆಯಲ್ಲಿ ಅವರು ಪ್ರತಿಪಕ್ಷಗಳು ಕಣಕ್ಕಿಳಿಸಿರುವ ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವಾ ಅವರನ್ನು ಚುನಾವಣೆಯಲ್ಲಿ ಎದುರಿಸಲಿದ್ದಾರೆ. 

ನಿನ್ನೆಯಷ್ಟೇ ಧಂಖರ್ ಅವರು ವಿವಿಧ ಪಕ್ಷಗಳ ಸಂಸದರನ್ನು ಭೇಟಿಯಾಗಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಈ ಸಭೆಯಲ್ಲಿ ಬಿಜು ಜನತಾ ದಳ ಮತ್ತು ಮತ್ತು ಲೋಕ ಜನಶಕ್ತಿ ಪಕ್ಷದ ಸಂಸದರಲ್ಲದೆ, ಪ್ರಧಾನಿ ಮೋದಿ ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಉಪಸ್ಥಿತರಿದ್ದರು.

ಉಪ ರಾಷ್ಟ್ರಪತಿ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಹಾಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT