ರಾಷ್ಟ್ರಪತಿ ಅಭ್ಯರ್ಥಿಗಳಾದ ದ್ರೌಪದಿ ಮುರ್ಮು, ಯಶವಂತ ಸಿನ್ಹಾ 
ದೇಶ

ರಾಷ್ಟ್ರಪತಿ ಚುನಾವಣೆಯ ಮತದಾನ ಮುಕ್ತಾಯ, ದ್ರೌಪದಿ ಮುರ್ಮು ಗೆಲುವ ಬಹುತೇಕ ಖಚಿತ

ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ, 15ನೇ ರಾಷ್ಟ್ರಪತಿಯ ಆಯ್ಕೆಗಾಗಿ ಸೋಮವಾರ ಚುನಾವಣೆ ನಡೆಯಿತು. ದೇಶದ ಒಟ್ಟು 770 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ರಾಷ್ಟ್ರಪತಿ ಚುನಾವಣೆ...

ನವದೆಹಲಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ, 15ನೇ ರಾಷ್ಟ್ರಪತಿಯ ಆಯ್ಕೆಗಾಗಿ ಸೋಮವಾರ ಚುನಾವಣೆ ನಡೆಯಿತು. ದೇಶದ ಒಟ್ಟು 770 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ರಾಷ್ಟ್ರಪತಿ ಚುನಾವಣೆ ಮುಕ್ತಾಯಗೊಂಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವ ಬಹುತೇಕ ಖಚಿತವಾಗಿದೆ.

ಇಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.  98.90 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಸಂಸತ್  ಚುನಾವಣಾಧಿಕಾರಿ ಪಿಸಿ ಮೋದಿ ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸೇರಿದಂತೆ ಹಲವು ನಾಯಕರು ಸಂಸತ್ ಭವನದಲ್ಲಿ ಮತ ಚಲಾಯಿಸಿದರು. ಅಲ್ಲದೆ ದೇಶಾದ್ಯಂತ ರಾಜ್ಯ ವಿಧಾನಸಭೆಗಳಲ್ಲೂ ಮತದಾನ ನಡೆಯಿತು.

ರಾಷ್ಟ್ರಪತಿ ಚುನಾವಣೆಯಲ್ಲಿ ವಿವಿಧ ಪಕ್ಷಗಳ ನಿಲುವಿನ ಪ್ರಕಾರ, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸುವ ಸಾಧ್ಯತೆ ಇದೆ. ಜುಲೈ 21 ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಮತದಾನದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ ಮೋದಿ, 727 ಸಂಸದರು ಮತ್ತು ಒಂಬತ್ತು ಶಾಸಕರು ಸೇರಿದಂತೆ 736 ಮತದಾರರಿಗೆ ಸಂಸತ್ ಭವನದಲ್ಲಿ ಮತ ಚಲಾಯಿಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆ ಪೈಕಿ 728 (719 ಸಂಸದರು ಮತ್ತು ಒಂಬತ್ತು ಶಾಸಕರು) ಮಂದಿ ಮತ ಚಲಾಯಿಸಿದ್ದಾರೆ ಎಂದರು.

ಇದಕ್ಕೂ ಮುನ್ನ ಆರು ಸಂಸದರು ಮತ ಚಲಾಯಿಸಿಲ್ಲ ಎಂದು ಅಧಿಕಾರಿ ಹೇಳಿದ್ದರು. ಆದರೆ ಅಂಕಿಅಂಶಗಳನ್ನು ಮರುಸಂಗ್ರಹಿಸಿದ ನಂತರ ಮತ ಚಲಾಯಿಸಿದ ಸಂಸದರ ಸಂಖ್ಯೆ ಎಂಟಕ್ಕೆ ಏರಿಕೆಯಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT