ಕಲ್ಲುಕುರಿಚಿ ಶಾಲೆಯ ಆವರಣದಲ್ಲಿ ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆಯ ಸಂಗ್ರಹ ಚಿತ್ರ 
ದೇಶ

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆ

ಮದ್ರಾಸ್ ಹೈಕೋರ್ಟ್ ಮರು ಮರಣೋತ್ತರ ಪರೀಕ್ಷೆ ಮಾಡುವಂತೆ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕಲ್ಲಕುರಿಚಿಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಷಕರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವದೆಹಲಿ: ಮದ್ರಾಸ್ ಹೈಕೋರ್ಟ್ ಮರು ಮರಣೋತ್ತರ ಪರೀಕ್ಷೆ ಮಾಡುವಂತೆ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕಲ್ಲಕುರಿಚಿಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಷಕರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಬದಲಿಗೆ ನಾಳೆ ಬಾಲಕಿಯ ಕುಟುಂಬದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಮೃತ ಬಾಲಕಿಯ ತಂದೆ ಇಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಮರಣೋತ್ತರ ಪರೀಕ್ಷೆಯಲ್ಲಿ ತಮ್ಮಿಚ್ಛೆಯ ವೈದ್ಯಕೀಯ ತಂಡವನ್ನು ನೇಮಿಸಿ ಮರು ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿಕೊಂಡಿದ್ದರು. 

ಕಲ್ಲಕುರಿಚಿಯ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ 12ನೇ ತರಗತಿಯ ವಿದ್ಯಾರ್ಥಿನಿಯ ಸಾವಿನ ನಂತರ ಪ್ರತಿಭಟನೆ ಹಿನ್ನೆಲೆಯಲ್ಲಿ ಭುಗಿಲೆದ್ದ ತೀವ್ರ ಹಿಂಸಾಚಾರ ನಂತರ 2ನೇ ಬಾರಿಗೆ ಮರಣೋತ್ತರ ಪರೀಕ್ಷೆ ಮಾಡುವಂತೆ ನಿನ್ನೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು. 

ಮೃತ ವಿದ್ಯಾರ್ಥಿನಿಯ ಮೊದಲ ಶವಪರೀಕ್ಷೆ ಮಾಡಿದ್ದು ಜುಲೈ 14ರಂದು, ಅದರಲ್ಲಿ ವಿದ್ಯಾರ್ಥಿನಿ ಸಾಯುವುದಕ್ಕೆ ಮೊದಲು ಆಕೆಯ ದೇಹದಲ್ಲಿ ಗಾಯಗಳಾಗಿವೆ. ಇದಾದ ಬಳಿಕ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿ ತಂದೆ ಇದೊಂದು ಕೊಲೆ ಎಂಬ ಸಂಶಯವಿರುವುದರಿಂದ ಎರಡನೇ ಬಾರಿ ಶವಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದ್ದರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಇಮದು ಶಾಲಾ ಆಡಳಿತ ಮಂಡಳಿಯ ಐವರನ್ನು ಬಂಧಿಸಲಾಗಿದೆ. ಶಾಲೆಯ ಕಾರ್ಯದರ್ಶಿ ಶಾಂತಿ, ಪ್ರಾಂಶುಪಾಲ ಶಿವ ಶಂಕರನ್, ಶಾಲೆಯ ವರದಿಗಾರ ರವಿಕುಮಾರ್, ಇಬ್ಬರು ಶಿಕ್ಷಕರನ್ನು ಬಂಧಿಸಿ 15 ದಿನಗಳ ಕಾಲ ಕಸ್ಟಡಿಗೊಪ್ಪಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT