ಸಾಂದರ್ಭಿಕ ಚಿತ್ರ 
ದೇಶ

ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರಿಗೆ ಒಳ ಉಡುಪು ಕಳಚಿಸಿದ ಆರೋಪ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ

ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ  ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿಗಳನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ನವದೆಹಲಿ: ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿಗಳನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಇದು ಅತಿರೇಕದ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದ್ದು, ವಿದ್ಯಾರ್ಥಿನಿಯರು ಮಾಡಿರುವ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಕಾಲಮಿತಿಯೊಳಗೆ ತನಿಖೆ ನಡೆಸಿ, ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ. 

ಕೇರಳ ಪೊಲೀಸ ಮಹಾನಿರ್ದೇಶಕರಿಗೂ ಆಯೋಗ ಪತ್ರ ಬರೆದಿದ್ದು, ಈ ವಿಚಾರದಲ್ಲಿ ನ್ಯಾಯಯುತವಾಗಿ ತನಿಖೆ ನಡೆಯಬೇಕು ಮತ್ತು ಒಂದು ವೇಳೆ ಆರೋಪ ಸತ್ಯವೆಂದು ಕಂಡುಬಂದಲ್ಲಿ ಸಂಬಂಧಿಸಿದ ಕಾನೂನಿನಡಿ ಎಫ್ ಐಆರ್ ದಾಖಲಿಸಬೇಕು. ಮೂರು ದಿನಗಳೊಳಗೆ  ಕ್ರಮ ಕೈಗೊಳ್ಳಬೇಕು ಎಂದು ಎನ್ ಸಿ ಡಬ್ಲ್ಯೂ ಹೇಳಿದೆ. 

ನೀಟ್ ಪರೀಕ್ಷೆಗೂ ಮುನ್ನ ಒಳ ಉಡುಪು ಕಳಚುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸಲಾಗಿತ್ತು ಎಂಬುದರ ಬಗ್ಗೆ ಮಂಗಳವಾರ ಪ್ರತಿಭಟನೆ ನಡೆದಿದೆ. ಆದರೆ, ಈ ಆರೋಪ ಕಪೋಲ ಕಲ್ಪಿತ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸಮರ್ಥಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ