ಪ್ರತಿಭಟನಾನಿರತ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು 
ದೇಶ

ಸಂಸತ್ ಅಧಿವೇಶನ: ಜಿಎಸ್ ಟಿ, ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕೂಡಾ ಕೆಲವು ಹೊಸ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತಿತರ ಪಕ್ಷಗಳ ಸದಸ್ಯರು ಭಿತ್ತಿಪತ್ರ ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ನವದೆಹಲಿ: ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕೂಡಾ ಕೆಲವು ಹೊಸ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತಿತರ ಪಕ್ಷಗಳ ಸದಸ್ಯರು ಭಿತ್ತಿಪತ್ರ ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆ ವಿರುದ್ಧ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಏಬ್ಬಿಸಿದರು. ಕೆಲವು ವಸ್ತುಗಳ ಮೇಲೆ ಮತ್ತೆ 'ಗಬ್ಬರ್ ಸಿಂಗ್ ಟ್ಯಾಕ್ಸ್ ' ಎಂದು ಬರೆಯಲಾದ ಭಿತ್ತಿಪತ್ರ ಪ್ರದರ್ಶಿಸಿ ಗದ್ದಲ ಉಂಟುಮಾಡಿದರು. ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನಗಳಿಗೆ ತೆರಳುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದರು.

ಸದನದ ಒಳಗಡೆ ಭಿತ್ತಿಪತ್ರ ಹಿಡಿಯುವುದು ಸಂಸದೀಯ ನಿಯಮಗಳಿಗೆ ವಿರುದ್ಧವಾದದ್ದು ಎಂದರು. ಸ್ಪೀಕರ್ ಮನವಿಗೆ ಪ್ರತಿಪಕ್ಷಗಳ ಸದಸ್ಯರು ಕಿವಿಗೂಡದ ಹಿನ್ನೆಲೆಯಲ್ಲಿ 15 ನಿಮಿಷ ಕಲಾಪ ನಡೆಸಿ, ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

ಬೆಲೆ ಏರಿಕೆಯಿಂದ ಹಿಡಿದು ಅಗ್ನಿಪಥ ಯೋಜನೆಯವರೆಗಿನ ವಿಷಯಗಳ ಕುರಿತು ತಕ್ಷಣ ಚರ್ಚೆ ನಡೆಸುವಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಂಗಳವಾರ ಭೋಜನಾ ವಿರಾಮಕ್ಕೂ ಮುನ್ನ ಅಧಿವೇಶನದಲ್ಲಿ ಯಾವುದೇ ವ್ಯವಹಾರ ನಡೆಸದೆ ಮುಂದೂಡಲಾಯಿತು.

ಪ್ರಸ್ತಾಪಿತ ವಿಷಯಗಳ ಮೇಲಿನ ಚರ್ಚೆಗೆ ಕಾಂಗ್ರೆಸ್, ಎಡ ಹಾಗೂ ಎಎಪಿ ಒತ್ತಾಯಿಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT