ಸಂಗ್ರಹ ಚಿತ್ರ 
ದೇಶ

ಸಣ್ಣ ಅಂಗಡಿಗಳ ಸರಕು ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೇರುವುದಿಲ್ಲ: ಕೇರಳ ಸರ್ಕಾರ

ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಕೇರಳ ಸರ್ಕಾರ ಸಣ್ಣ ಅಂಗಡಿಗಳ ಸರಕು ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೇರುವುದಿಲ್ಲ ಎಂದು ಘೋಷಣೆ ಮಾಡಿದೆ.

ತಿರುವನಂತಪುರ: ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಕೇರಳ ಸರ್ಕಾರ ಸಣ್ಣ ಅಂಗಡಿಗಳ ಸರಕು ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೇರುವುದಿಲ್ಲ ಎಂದು ಘೋಷಣೆ ಮಾಡಿದೆ.

ಸಣ್ಣಪುಟ್ಟ ಅಂಗಡಿಗಳಲ್ಲಿ ಮಾರಾಟ ಮಾಡುವ ದಿನಬಳಕೆಯ ಮತ್ತು ಸರಕು ವಸ್ತುಗಳಿಗೆ ರಾಜ್ಯದಲ್ಲಿ ಯಾವುದೇ ರೀತಿಯ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇರಳದ ಹಣಕಾಸು ಸಚಿವ ಕೆ. ಎನ್. ಬಾಲಗೋಪಾಲ ಅವರು ವಿಧಾನಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸಣ್ಣ ಅಂಗಡಿಗಳಲ್ಲಿ 1–2 ಕೆಜಿ ಪ್ಯಾಕ್‌ಗಳಲ್ಲಿ ಚಿಲ್ಲರೆಯಾಗಿ ಮಾರಾಟ ಮಾಡುವ ದಿನಬಳಕೆಯ ವಸ್ತು, ದಿನಸಿ, ಇತರ ಸರಕು ಸಾಮಾಗ್ರಿಗಳಿಗೆ ಕೇರಳ ಸರ್ಕಾರ ಜಿಎಸ್‌ಟಿ ವಿಧಿಸುವುದಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆ ಜಟಾಪಟಿ ನಡೆಯಬಹುದು. ಆದರೂ, ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಕೇರಳ ಸರ್ಕಾರದ ನಿರ್ಧಾರದ ಕುರಿತು ಕೇಂದ್ರಕ್ಕೆ ಈಗಾಗಲೇ ಪತ್ರ ಬರೆಯಲಾಗಿದ್ದು, ಸಣ್ಣ ಅಂಗಡಿಗಳು, ಮಾರಾಟಗಾರರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗಲಿ ಮತ್ತು ಹೆಚ್ಚಿನ ತೆರಿಗೆ ಹೊರೆ ಬೀಳದಿರಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಕೇಂದ್ರದ ಜತೆ ಸಂಘರ್ಷ ಏರ್ಪಡಬಹುದು. ಆದರೆ ಮುಖ್ಯಮಂತ್ರಿ ಈ ಬಗ್ಗೆ ಕೇಂದ್ರಕ್ಕೆ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ದೇಶದಲ್ಲಿ ಜಿಎಸ್‌ಟಿ ಪರಿಷ್ಕರಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇರಳ ಸರ್ಕಾರದ ಈ ನಿರ್ಧಾರ ಗಮನ ಸೆಳೆದಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT