ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ದ್ರೌಪದಿ ಮುರ್ಮು ಬೆಂಬಲಿಸಿ 17 ಪ್ರತಿಪಕ್ಷ ಸಂಸದರಿಂದ ಅಡ್ಡ ಮತದಾನ: ಮೂಲಗಳು

ತೀವ್ರ ಕುತೂಹಲ ಕೆರಳಿಸಿದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದಾರೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದಾರೆ.

ಮತ ಎಣಿಕೆಯ ಆರಂಭದಿಂದಲೂ ಎಲ್ಲಾ ಸುತ್ತಿನಲ್ಲೂ ವಿಪಕ್ಷ ಅಭ್ಯರ್ಥಿ ಯಶವಂತ ಸಿನ್ಹಾ ಅವರಿಗಿಂತ ಮುನ್ನಡೆ ಸಾಧಿಸುತ್ತಾ ಬಂದಿದ್ದ ದ್ರೌಪದಿ ಮುರ್ಮು, ಮೂರನೇ ಎರಡರಷ್ಟು ಬಹುಮತ ಪಡೆಯುವುದರೊಂದಿಗೆ ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. 17 ಪ್ರತಿಪಕ್ಷಗಳ ಸಂಸದರು ಅಡ್ಡ ಮತದಾನ ಮಾಡುವುದರೊಂದಿಗೆ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿರುವುದಾಗಿ ಮೂಲಗಳು ತಿಳಿಸಿವೆ.

ಎಲ್ಲಾ ಮತಗಳ ಎಣಿಕೆ ಮುಗಿದ ನಂತರ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳುವ ಸಾಧ್ಯತೆಯಿದೆ. ಆದರೆ, ಈಗಾಗಲೇ ಅವರು 5,77,777 ಮತಗಳನ್ನು ಪಡೆದಿದ್ದಾರೆ. ಇದು ಜುಲೈ 18 ರಂದು ನಡೆದ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮೌಲ್ಯದಲ್ಲಿಅರ್ಧಕ್ಕಿಂತಲೂ ಹೆಚ್ಚಾಗಿದೆ.

ಒಟ್ಟಾರೇ ಮಾನ್ಯಗೊಂಡ ಮತಗಳಲ್ಲಿ ಶೇ. 53 ರಷ್ಟು ಮತಗಳನ್ನು ಮುರ್ಮು ಈಗಾಗಲೇ ಪಡೆದಿರುವುದಾಗಿ ಚುನಾವಣಾಧಿಕಾರಿ ಪಿ.ಸಿ. ಮೋದಿ ಘೋಷಿಸಿದ್ದಾರೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬ್ಯಾಲೆಟ್ ಗಳನ್ನು ಇನ್ನೂ ಎಣಿಕೆ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT