ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಇಂದು 21,566 ಹೊಸ ಪ್ರಕರಣ ದಾಖಲು, 45 ಮಂದಿ ಸಾವು

ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ  21,566 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಸಂಖ್ಯೆ 4,38,25,185ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ  21,566 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಸಂಖ್ಯೆ 4,38,25,185ಕ್ಕೆ ಏರಿಕೆಯಾಗಿದೆ. ಅಲ್ಲದೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,48,881ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಬೆಳಗ್ಗೆ 8 ಗಂಟೆಗೆ ನವೀಕರಿಸಿದ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕೊರೋನಾ ಸೋಂಕಿನಿಂದ 45 ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 5,25,870 ಕ್ಕೆ ಏರಿದೆ.

ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳ ಶೇಕಡಾ 0.34 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣವು ಶೇ. 98.46  ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,227 ರಷ್ಟು ಹೆಚ್ಚಳವಾಗಿದೆ. ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,31,50,434 ಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ ಶೇಕಡಾ 1.2 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!