ದೇಶ

ಹುಟ್ಟುಹಬ್ಬದ ದಿನ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ!

Nagaraja AB

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.

ರಾಜ್ಯದ ಹಿರಿಯ ಮುತ್ಸದಿ ರಾಜಕಾರಣಿ, ಸೋನಿಯಾ ಗಾಂಧಿ ಅವರ ಆಪ್ತರಲ್ಲಿ ಒಬ್ಬರಾಗಿರುವ ಖರ್ಗೆ 80 ವಸಂತಗಳನ್ನು ಪೂರೈಸಿರುವ 81 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಆದರೆ, ಹುಟ್ಟುಹಬ್ಬದ ಸಂಭ್ರಮದಲ್ಲಿರಬೇಕಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಪೊಲೀಸ್ ಠಾಣೆಯಲ್ಲಿ ಕಾಲ ಕಳೆಯುವಂತಾಗಿದೆ.

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದರಿಂದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕಿಂಗ್ ಸ್ವೆ ಕ್ಯಾಂಪ್ ಪೊಲೀಸ್ ಠಾಣೆಗೆ ಕರೆದೊಯ್ದರು. ಇದರಿಂದಾಗಿ ಹುಟ್ಟಹಬ್ಬದ ದಿನ ಖರ್ಗೆ ಅಲ್ಲಿಯೇ ಕಾಲ ಕಳೆಯುವಂತಾಯಿತು.

SCROLL FOR NEXT