ದೇಶ

ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

Nagaraja AB

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಇದಕ್ಕೂ ಮುನ್ನ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ ನಂತರ ಸಂಸತ್ ಭವನಕ್ಕೆ ಆಗಮಿಸಿದ ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆತ್ಮೀಯವಾಗಿ ಸ್ವಾಗತ ನೀಡಿ ಬರಮಾಡಿಕೊಂಡರು. 

ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ನೋಡಲು ಅವಕಾಶ ಸಿಕ್ಕಿರುವುದು ಸಂತಸವನ್ನುಂಟು ಮಾಡಿದೆ ಎಂದರು. 

ನಂತರ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗಡೆ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿಗೆ ಅವರಿಗೆ ಮಾಲಾರ್ಪಣೆ ಮಾಡಿ ಗೌರವಿಸಿದರು.

SCROLL FOR NEXT