ಸಾಂದರ್ಭಿಕ ಚಿತ್ರ 
ದೇಶ

ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ: ಫಲಿತಾಂಶ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಕೇಂದ್ರೀಯ ಪೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ)ಯ 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಶುಕ್ರವಾರ 12ನೇ ತರಗತಿ ಫಲಿತಾಂಶ ಪ್ರಕಟಿಸಿ ಸಿಬಿಎಸ್ಇ ಪ್ರಕಟಣೆ ಹೊರಡಿಸಿದೆ. ಈ ವರ್ಷ, 12 ನೇ ತರಗತಿಯಲ್ಲಿ ಒಟ್ಟಾರೆ ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ನವದೆಹಲಿ:  ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಶುಕ್ರವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು ಶೇಕಡಾ 92.71 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಹುಡುಗಿಯರು ಹುಡುಗರಿಗಿಂತ ಶೇ.3.29ರಷ್ಟು ಸಾಧನೆ ಮಾಡಿದ್ದಾರೆ ಎಂದು ಸಿಬಿಎಸ್‌ಇ ಹೇಳಿದೆ.

33 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 1.34 ಲಕ್ಷ ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಮೊದಲ ಬಾರಿಗೆ, 2021-22ರ ಶೈಕ್ಷಣಿಕ ಅವಧಿಗೆ ಬೋರ್ಡ್ ಪರೀಕ್ಷೆಗಳನ್ನು ಎರಡು ಅವಧಿಗಳಲ್ಲಿ ನಡೆಸಲಾಯಿತು. ಥಿಯರಿ ಪೇಪರ್‌ಗಳಿಗೆ ಮೊದಲ ಅವಧಿಯ ಅಂಕಗಳಿಗೆ 30, ಎರಡನೇ ಅವಧಿಯ ಅಂಕಗಳಿಗೆ 70 ಅಂಕಗಳನ್ನು ನೀಡಲಾಗಿದೆ. 

ಎಂದಿನಂತೆ ವಿದ್ಯಾರ್ಥಿನಿಯರೇ ವಿದ್ಯಾರ್ಥಿಗಳಿಗಿಂತ ಮುಂದಿದ್ದಾರೆ. ವಿದ್ಯಾರ್ಥಿನಿಯರು ಶೇಕಡಾ 94.54ರಷ್ಟು ತೇರ್ಗಡೆಯಾದರೆ ಶೇಕಡಾ 91.25ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 

CBSE 12 ನೇ ಫಲಿತಾಂಶ ಇದೀಗ results.cbse.nic.in ಮತ್ತು cbse.gov.in ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳು ತಮ್ಮ ಖಾತೆಗಳಿಗೆ ಲಾಗ್ ಇನ್ ಮಾಡುವ ಮೂಲಕ ಡಿಜಿಲಾಕರ್‌ನಲ್ಲಿ ಆನ್‌ಲೈನ್‌ನಲ್ಲಿ CBSE ಫಲಿತಾಂಶಗಳನ್ನು ಪರಿಶೀಲಿಸಬಹುದು. cbseresults.nic.in, cbse.nic.in, results.cbse.nic.in, digilocker.gov.in ನಲ್ಲಿ ಕೂಡ ವೀಕ್ಷಿಸಬಹುದು.

CBSE 12 ನೇ ಫಲಿತಾಂಶಗಳನ್ನು ಪರೀಕ್ಷಾ ಸಂಗಮದಲ್ಲಿ ಅಪ್‌ಲೋಡ್ ಮಾಡಲಾಗಿದೆ. ವಿದ್ಯಾರ್ಥಿಗಳು CBSE 12 ನೇ ಫಲಿತಾಂಶ 2022 ಮಾರ್ಕ್ ಶೀಟ್, ಹೌಯರ್, ಡಿಜಿಲಾಕರ್‌ನಲ್ಲಿ ಲಭ್ಯವಿದೆ. 

ವಿದ್ಯಾರ್ಥಿಗಳು ತಮ್ಮ CBSE ಮಾರ್ಕ್ ಶೀಟ್‌ಗಳನ್ನು ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಬಹುದು. ಡಿಜಿಲಾಕರ್‌ನಲ್ಲಿ ತಮ್ಮ ಸಿಬಿಎಸ್‌ಇ ಫಲಿತಾಂಶವನ್ನು ವೀಕ್ಷಿಸಲು ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆ ಮತ್ತು ಪಿನ್ ಬಳಸಿ ಲಾಗಿನ್ ಮಾಡಬೇಕಾಗುತ್ತದೆ. ಶಾಲೆಗಳಿಗೆ ಪಿನ್ ಕಳುಹಿಸಲಾಗಿದೆ. ಪಿನ್‌ಗಳನ್ನು ಪಡೆಯಲು ವಿದ್ಯಾರ್ಥಿಗಳು ಶಾಲೆಯನ್ನು ಸಂಪರ್ಕಿಸಬಹುದು. 

ಶಾಲೆಗಳು ಪರೀಕ್ಷಾ ಸಂಗಮ್ ಪೋರ್ಟಲ್‌ನಿಂದ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಸಹ ಸಾಧ್ಯವಾಗುತ್ತದೆ. CBSE ಫಲಿತಾಂಶಗಳು IVR ಮತ್ತು SMS ಮೂಲಕವೂ ಲಭ್ಯವಿವೆ. ನೇರ ಫಲಿತಾಂಶಕ್ಕೆ ಈ ಲಿಂಕ್ ಕ್ಲಿಕ್ ಮಾಡಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT