ದೇಶ

ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕನಿಂದ ಬೆದರಿಕೆ: ದೆಹಲಿಗೆ ಹೋಗುತ್ತಿದ್ದ ಇಂಡಿಗೊ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ

Sumana Upadhyaya

ನವದೆಹಲಿ: ತನ್ನ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಅಂದರೆ ಗುರುವಾರ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ (ಸಂಖ್ಯೆ 6ಇ 2126) ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. 

ತನ್ನ ಲಗೇಜಿನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬರು ಹೇಳಿಕೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಪರಿಶೀಲನೆ ನಡೆಸಿದರು. ಆತನ ಬ್ಯಾಗನ್ನು ಕೂಲಂಕಷವಾಗಿ ಪರಿಶೀಲಿಸಿದರೂ ಬಾಂಬ್ ಪತ್ತೆಯಾಗಲಿಲ್ಲ. ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಮಾನವನ್ನು ಮತ್ತಷ್ಟು ತಪಾಸಣೆ ನಡೆಸಲಾಗಿದೆ. 

ಎಲ್ಲಾ ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಹೆಚ್ಚಿನ ವಿವರಗಳು ಸಿಕ್ಕಿಲ್ಲ. 

SCROLL FOR NEXT