ದೇಶ

ಕೇರಳದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ, ಯುಎಇಯಿಂದ ಆಗಮಿಸಿದ ಮತ್ತೊಬ್ಬ ವ್ಯಕ್ತಿಗೆ ಪಾಸಿಟಿವ್

Lingaraj Badiger

ತಿರುವನಂತಪುರಂ: ಕೇರಳದಲ್ಲಿ ಭಾರತದ ಮೂರನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ಒಂದೇ ರಾಜ್ಯದಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ.

ಈ ತಿಂಗಳ ಆರಂಭದಲ್ಲಿ ಯುಎಇಯಿಂದ ಕೇರಳಕ್ಕೆ ಆಗಮಿಸಿದ 35 ವರ್ಷದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಜುಲೈ 6ರಂದು ಯುಎಇಯಿಂದ ರಾಜ್ಯಕ್ಕೆ ಆಗಮಿಸಿದ ಮಲಪ್ಪುರಂ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದ್ದು, ಅವರು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದಾರೆ. 

ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಲ್ಲರನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

SCROLL FOR NEXT