ಇಡಿ ದಾಳಿ 
ದೇಶ

ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ಸಂಪುಟ ಸಚಿವನ ಆಪ್ತನ ಮನೆಯಲ್ಲಿ 20 ಕೋಟಿ ರೂ. ನಗದು ವಶ!

ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಸಹಚರ ಅರ್ಪಿತಾ ಮುಖರ್ಜಿ ಮನೆಯಿಂದ ಜಾರಿ ನಿರ್ದೇಶನಾಲಯ ಇಂದು ಬರೋಬ್ಬರಿ 20 ಕೋಟಿ ರೂ. ನಗದು ವಶಪಡಿಸಿಕೊಂಡಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಸಹಚರ ಅರ್ಪಿತಾ ಮುಖರ್ಜಿ ಮನೆಯಿಂದ ಜಾರಿ ನಿರ್ದೇಶನಾಲಯ ಇಂದು ಬರೋಬ್ಬರಿ 20 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. 

ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದೆ. 'ಈ ಮೊತ್ತವು ಎಸ್‌ಎಸ್‌ಸಿ ಹಗರಣದ ಅಪರಾಧದ ಆದಾಯ ಎಂದು ಶಂಕಿಸಲಾಗಿದೆ' ಎಂದು ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಎಣಿಕೆ ಯಂತ್ರಗಳ ಮೂಲಕ ನಗದು ಎಣಿಕೆಗಿಳಿದಿರುವ ಇಡಿ ಶೋಧ ತಂಡಗಳು ಬ್ಯಾಂಕ್ ಅಧಿಕಾರಿಗಳ ನೆರವು ಪಡೆಯುತ್ತಿವೆ. ಅರ್ಪಿತಾ ಮುಖರ್ಜಿ ಅವರಿಂದ 20ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಉದ್ದೇಶ ಮತ್ತು ಬಳಕೆಯನ್ನು ಪತ್ತೆ ಹಚ್ಚಲಾಗುತ್ತಿದೆ.

ಸಚಿವ ಪಾರ್ಥ ಚಟರ್ಜಿ ಅವರಲ್ಲದೆ, ಶಿಕ್ಷಣ ಖಾತೆ ರಾಜ್ಯ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಮತ್ತು ಇತರರ ಮನೆ ಮೇಲೂ ಇಡಿ ದಾಳಿ ನಡೆಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರದಲ್ಲಿ ಇದುವರೆಗೂ ನಡೆದ ದಾಳಿಯಲ್ಲಿ ಸಿಕ್ಕಿರುವ ಅತಿ ದೊಡ್ಡ ಮೊತ್ತ ಇದಾಗಿದೆ .

ಪಾರ್ಥ ಚಟರ್ಜಿ ಅವರು ಪ್ರಸ್ತುತ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿದ್ದಾರೆ. ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (ಡಬ್ಲ್ಯುಬಿಎಸ್‌ಎಸ್‌ಸಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವ ಆರೋಪವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel