ಪಾರ್ಥ ಚಟರ್ಜಿ 
ದೇಶ

ಶಿಕ್ಷಕರ ನೇಮಕಾತಿ ಹಗರಣ: ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಎರಡು ಇಡಿ ವಶಕ್ಕೆ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನುಬ್ಯಾಂಕ್ ಶಾಲ್ ಕೋರ್ಟ್ ಎರಡು ದಿನ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.

ಕೋಲ್ಕತ್ತಾ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನುಬ್ಯಾಂಕ್ ಶಾಲ್ ಕೋರ್ಟ್ ಎರಡು ದಿನ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.

ಪಶ್ಚಿಮ ಬಂಗಾಳದ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರನ್ನು ಇಡಿ ಸುಮಾರು 26 ಗಂಟೆಗಳ ಕಾಲ ವಿಚಾರಣೆ ಬಳಿಕ ಬಂಧಿಸಿದ್ದು, ಬಳಿಕ ಬ್ಯಾಂಕ್ ಶಾಲ್ ಕೋರ್ಟ್ ಮುಂದೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಸಚಿವರನ್ನು ಎರಡು ದಿನ ಇಡಿ ವಶಕ್ಕೆ ನೀಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನ್ಯಾಯಾಲಯಕ್ಕೆ ಇಂದು ರಜೆ ಇದ್ದ ಕಾರಣ ಆರೋಪಿಯನ್ನು ಬ್ಯಾಂಕ್ ಶಾಲ್ ಕೋರ್ಟ್ ಗೆ ಹಾಜರುಪಡಿಸಲಾಯಿತು.

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರಿದ ಇಬ್ಬರು ಸಚಿವರು ಸೇರಿದಂತೆ ಸುಮಾರು ಹನ್ನೆರಡು ಜನರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿತು. ಸಚಿವ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಸಂಜೆ ದಾಳಿ ನಡೆಸಿದ್ದು, ಸುಮಾರು 20 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ