ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ಎಫ್ ಯೋಧರ ಗುಂಡಿನ ದಾಳಿ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ.
ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ.
ನಿನ್ನೆ ರಾತ್ರಿ 21.40 ರ ಸುಮಾರಿಗೆ ಜಮ್ಮುವಿನ ಕನ್ಹಚಕ್ ಪ್ರದೇಶದಲ್ಲಿ ಪಾಕಿಸ್ತಾನದ ಕಡೆಯಿಂದ ಡ್ರೋಣ್ ಲೈಟಿಂಗ್ ನ್ನು ಸೈನಿಕರು ಗಮನಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಎಸ್ ಎಫ್ ಯೋದರು ಗುರಿಯತ್ತ ಗುಂಡು ಹಾರಿಸಿದರು ಎಂದು ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನದಿಂದ ಯಾವುದೇ ರೀತಿಯ ವೈಮಾನಿಕ ದಾಳಿಯನ್ನು ತಪ್ಪಿಸಲು ಈ ಪ್ರದೇಶದಲ್ಲಿ ಕಟ್ಟುನಿಟ್ಟಿನ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕೂ ಮೊದಲು ಜುಲೈ 16 ಮತ್ತು 6 ರಂದು ಪೊಂಚ್ ಮತ್ತು ಸಾಂಬಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಚಟುವಟಿಕೆ ಕಂಡುಬಂದಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.