ದೇಶ

ದೆಹಲಿ ರೈಲು ನಿಲ್ದಾಣದಲ್ಲಿ ಗ್ಯಾಂಗ್ ರೇಪ್: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

Nagaraja AB

ನವದೆಹಲಿ: ದೇಶದ ರಾಜಧಾನಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ನವದೆಹಲಿ ರೈಲು ನಿಲ್ದಾಣದ ವಿದ್ಯುತ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ 30 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಲಾಗಿದೆ. ಈ ಸಂಬಂಧ ನಾಲ್ವರು ರೈಲ್ವೆ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ನಾಲ್ವರೂ ಆರೋಪಿಗಳು ರೈಲ್ವೆ ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಿಗಳಾಗಿದ್ದು, ಎಲ್ಲರನ್ನೂ ಬಂಧಿಸಲಾಗಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿ ತನಿಖೆ ಆರಂಭಿಸಲಾಗಿದೆ ಎಂದು ರೈಲ್ವೆ ಡಿಸಿಪಿ ಹರೇಂದ್ರ ಸಿಂಗ್ ತಿಳಿಸಿದ್ದಾರೆ.

SCROLL FOR NEXT