ಸಂಗ್ರಹ ಚಿತ್ರ 
ದೇಶ

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಧ್ವಜ ಸಂಹಿತೆಗೆ ತಿದ್ದುಪಡಿ, ಹಗಲು ರಾತ್ರಿ ಹಾರಾಟಕ್ಕೆ ಅವಕಾಶ

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ತಂದಿದ್ದು, ತ್ರಿವರ್ಣ ಧ್ವಜವನ್ನು ಹಗಲು-ರಾತ್ರಿ ಹಾರಿಸಲು ಅವಕಾಶ ನೀಡಿದೆ.

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ತಂದಿದ್ದು, ತ್ರಿವರ್ಣ ಧ್ವಜವನ್ನು ಹಗಲು-ರಾತ್ರಿ ಹಾರಿಸಲು ಅವಕಾಶ ನೀಡಿದೆ.

ಹೌದು.. 'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಂಗವಾಗಿ ಸರ್ಕಾರವು ಆಗಸ್ಟ್ 13 ರಿಂದ 15 ರವರೆಗೆ 'ಹರ್ ಘರ್ ತಿರಂಗ' (ಪ್ರತಿ ಮನೆಯಲ್ಲೂ ಧ್ವಜಾರೋಹಣ) ಪ್ರಾರಂಭಿಸಲಿರುವುದರಿಂದ ಮಹತ್ವದ ತೀರ್ಮಾನ ಕೈಗೊಂಡಿದ್ದು, ತ್ರಿವರ್ಣ ಧ್ವಜವನ್ನು ಹಗಲು ರಾತ್ರಿ ಹಾರಿಸಲು ಅವಕಾಶ ಕಲ್ಪಿಸಲಾಗಿದೆ. ಖಾದಿ, ಪಾಲಿಸ್ಟರ್‌ನ ಜೊತೆಗೆ ಯಂತ್ರದಿಂದ ತಯಾರಿಸಿದ ಧ್ವಜಗಳ ಬಳಕೆಗೂ ಅವಕಾಶ ನೀಡುವಂತೆ ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದೆ.

ಈ ಕುರಿತಂತೆ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಭಾರತೀಯ ರಾಷ್ಟ್ರಧ್ವಜದ ಪ್ರದರ್ಶನ, ಹಾರಾಟ ಮತ್ತು ಬಳಕೆಯನ್ನು ಭಾರತದ ಧ್ವಜ ಸಂಹಿತೆ, 2002 ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆ, 1971 ರ ಮೂಲಕ ನಿಯಂತ್ರಿಸಲಾಗುತ್ತದೆ.  ಭಾರತದ ಧ್ವಜ ಸಂಹಿತೆ, 2002 ಅನ್ನು ಜುಲೈ 20, 2022 ರ ಆದೇಶದ ಮೂಲಕ ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ ಮತ್ತು ಭಾರತದ ಧ್ವಜ ಸಂಹಿತೆ, 2002 ರ ಭಾಗ-II ನ ಪ್ಯಾರಾಗ್ರಾಫ್ 2.2 ರ ಷರತ್ತು (xi) ಅನ್ನು ಈಗ ಈ ಕೆಳಗಿನಂತೆ ಓದಲಾಗುತ್ತದೆ:- (xi ) "ಧ್ವಜವನ್ನು ತೆರೆದ ಸ್ಥಳದಲ್ಲಿ ಪ್ರದರ್ಶಿಸಲಾಗುತ್ತದೆ ಅಥವಾ ಸಾರ್ವಜನಿಕ ಸದಸ್ಯರ ಮನೆಯ ಮೇಲೆ ಪ್ರದರ್ಶಿಸಲಾಗುತ್ತದೆ, ಅದನ್ನು ಹಗಲು ರಾತ್ರಿ ಹಾರಿಸಬಹುದು" ಎಂದು ಹೇಳಿದ್ದಾರೆ.

ಈ ಹಿಂದೆ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗೆ ಮಾತ್ರ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಯಂತ್ರದಿಂದ ತಯಾರಿಸಿದ ಮತ್ತು ಪಾಲಿಸ್ಟರ್‌ ಧ್ವಜಗಳನ್ನು ಬಳಸಲು ಅನುಮತಿ ಇರಲಿಲ್ಲ.

ಪ್ರಗತಿಪರ ಸ್ವತಂತ್ರ ಭಾರತದ 75 ವರ್ಷಗಳ ನೆನಪಿಗಾಗಿ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸಲು 'ಹರ್ ಘರ್ ತಿರಂಗ' ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಡಿಸೆಂಬರ್, 30, 2021 ಮತ್ತು ಜುಲೈ 20, 2022 ರಂದು ಮಾಡಿದ ಬದಲಾವಣೆಗಳು ಮತ್ತು ರಾಷ್ಟ್ರಧ್ವಜದ ಬಳಕೆ ಮತ್ತು ಪ್ರದರ್ಶನದ ಬಗ್ಗೆ ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ ಗಳು) ಸೇರಿದಂತೆ ಧ್ವಜ ಸಂಹಿತೆಯ ಪ್ರಮುಖ ಲಕ್ಷಣಗಳನ್ನು ಗೃಹ ಕಾರ್ಯದರ್ಶಿ ತಮ್ಮ ಪತ್ರದೊಂದಿಗೆ ಲಗತ್ತಿಸಿದ್ದಾರೆ. "ನಿಮ್ಮ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ವಿವಿಧ ಸಂಸ್ಥೆಗಳು, ಪಿಎಸ್‌ಯುಗಳಲ್ಲಿ ಇವುಗಳನ್ನು ವ್ಯಾಪಕವಾಗಿ ಹರಡಿರುವುದನ್ನು ಖಚಿತಪಡಿಸಿಕೊಳ್ಳಲು ನಿಮ್ಮನ್ನು ವಿನಂತಿಸಲಾಗಿದೆ" ಎಂದು ಗೃಹ ಕಾರ್ಯದರ್ಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

SCROLL FOR NEXT