ದೇಶ

ಜುಲೈ 26ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದ ಇಡಿ

Lingaraj Badiger

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ 26ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮುಂಚೆ ಜುಲೈ 25ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲ ಸೂಚಿಸಿತ್ತು. ಆದರೆ ಈಗ ಸೋನಿಯಾ ಗಾಂಧಿ ಅವರ ಇಡಿ ಮುಂದೆ ಮಂಗಳವಾರ(ಜುಲೈ 26) ವಿಚಾರಣೆಗೆ ಹಾಜರಾಗಬೇಕೇ ಹೊರತು ಸೋಮವಾರ ಅಲ್ಲ ಎಂದು ಹೇಳಿದ್ದು, ದಿನಾಂಕ ಬದಲಾವಣೆಗೆ ಕಾರಣ ತಿಳಿಸಿಲ್ಲ.

ಜುಲೈ ೨೧ ರಂದು ಸೋನಿಯಾ ಗಾಂಧಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ತನಿಖೆಯು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್-ಪ್ರಚಾರದ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದೆ.

SCROLL FOR NEXT