ದೇಶ

ವಿಚಾರಣೆ ನ್ಯಾಯಯುತವಾಗಿ ನಡೆದಿಲ್ಲ ಎಂದು ತಿಹಾರ್ ಜೈಲಿನಲ್ಲಿ ಯಾಸಿನ್ ಮಲಿಕ್ ಉಪವಾಸ ಸತ್ಯಾಗ್ರಹ

Lingaraj Badiger

ನವದೆಹಲಿ: ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆಯಿಂದ ಮಲಿಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ಖಚಿತಪಡಿಸಿದ್ದಾರೆ.

2017 ರ ಭಯೋತ್ಪಾದಕ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಅವರನ್ನು ದೋಷಿ ಎಂದು ಘೋಷಿಸಲಾಗಿದ್ದು, ಮೇ 25 ರಂದು ಎನ್ಐಎ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಯಾಸಿನ್ ಮಲಿಕ್ ಅವರ ಉಪವಾಸ ಸತ್ಯಾಗ್ರಹದ ಕುರಿತ ಕಾರಣವನ್ನು ಕೇಳಿದಾಗ, ಅಧಿಕಾರಿಯು ಯಾವುದೇ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದರು. ಆದರೆ, ಮಲಿಕ್ ತನ್ನ ವಿರುದ್ಧದ ಪ್ರಕರಣಗಳ ವಿಚಾರಣೆ ನ್ಯಾಯಯುತವಾಗಿ ನಡೆದಿಲ್ಲ ಎಂದು ಆರೋಪಿಸಿ ತನಿಖೆ ನಡೆಸಿದ ಸಂಸ್ಥೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಜೈಲು ಮೂಲಗಳು ತಿಳಿಸಿವೆ.

SCROLL FOR NEXT