ಅಪಘಾತಕ್ಕೆ ಛಿದ್ರಗೊಂಡಿರುವ ಕಾರು 
ದೇಶ

ಆಂಧ್ರ ಪ್ರದೇಶ: ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ, ಬೆಂಗಳೂರಿನ ಮೂವರು ಪೊಲೀಸರು ದುರ್ಮರಣ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.

ಚಿತ್ತೂರು: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.

ಕರ್ತವ್ಯದ ಮೇರೆಗೆ ತಿರುಪತಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪುತಲಪಟ್ಟು ಮಂಡಲದ ಪಿ. ಕೊಟ್ಟಕೋಟದಲ್ಲಿ  ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

 ಸ್ಥಳಕ್ಕೆ ಚಿತ್ತೂರು ಡಿವೈಎಸ್ ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಸಿಬ್ಬಂದಿ ಸಾವಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ ಮಿಡಿದಿದ್ದಾರೆ.

ಪಿಎಸ್ ಐ ಅವಿನಾಶ್ (29) ಕಾನ್ಸ್ ಟೇಬಲ್  ಅನಿಲ್ ಮುಳಿಕ್ (26)  ಕ್ಯಾಬ್ ಚಾಲಕ ಜೋಸೆಫ್ (28)  ಮೃತಪಟ್ಟವರು. ಕಾನ್ಸ್ ಟೇಬಲ್ ಗಳಾದ ದೀಕ್ಷಿತ್, ಶರಣ ಬಸವ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ತೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಎಸ್ ಐ ಅವಿನಾಶ್ ಬೀದರ್  ಜಿಲ್ಲೆ ಬಸವ ಕಲ್ಯಾಣದ ರೋಲವಾಡಿ ಗ್ರಾಮದವರು. ಈ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತದಲ್ಲಿ ಮೃತಪಟ್ಟವರು

ಗಾಂಜಾ ಕೇಸ್ ಸಂಬಂಧ ಆರೋಪಿಯನ್ನು ಬಂಧಿಸಲು ತಿರುಪತಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಿಎಸ್ ಐ ಸೇರಿದಂತೆ ಮೂವರ ದುರ್ಮರಣಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಮೃತರ ಕುಟುಂಬದ ಜೊತೆಗೆ ಇಲಾಖೆ ಇರಲಿದೆ ಟ್ವೀಟ್ ಮೂಲಕ ಪ್ರವೀಣ್ ಸೂದ್ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT