ಮಂಕಿಪಾಕ್ಸ್ (ಸಂಗ್ರಹ ಚಿತ್ರ) 
ದೇಶ

ದೇಶದಲ್ಲಿ 4 ನೇ ಮಂಕಿಪಾಕ್ಸ್ ಪ್ರಕರಣ: ಕೇಂದ್ರದಿಂದ ಉನ್ನತ ಮಟ್ಟದ ಸಭೆ 

ದೇಶದಲ್ಲಿ ಮಂಕಿಪಾಕ್ಸ್ ನ 4 ನೇ ಪ್ರಕರಣ ವರದಿಯಾಗಿದ್ದು, ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಭೆ ನಡೆಸಿದೆ.

ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ನ 4 ನೇ ಪ್ರಕರಣ ವರದಿಯಾಗಿದ್ದು, ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಭೆ ನಡೆಸಿದೆ. ಭಾನುವಾರದಂದು ಆರೋಗ್ಯ ಸೇವೆಗಳ ಪ್ರಧಾನನಿರ್ದೇಶನಾಲಯದಿಂದ ಈ ಉನ್ನತ ಮಟ್ಟದ ಸಭೆ ನಡೆದಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ರಾಷ್ಟ್ರರಾಜಧಾನಿಗೂ ಮಂಕಿ ಪಾಕ್ಸ್​​ ಸೋಂಕು ಹರಡಿದ್ದು, ಯಾವುದೇ ಟ್ರಾವೆಲ್​​ ಹಿಸ್ಟರಿ ಇಲ್ದೇ ಇದ್ರೂ ಸೋಂಕು ಪತ್ತೆಯಾಗಿದೆ.

31 ವರ್ಷದ ವ್ಯಕ್ತಿಗೆ ಮೈಮೇಲೆ  ಗುಳ್ಲೆಗಳು ಹಾಗೂ ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯದಲ್ಲಿ ಸ್ಥಿರತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸೋಂಕಿತನನ್ನ ಐಸೊಲೇಷನ್​​ ಮಾಡಲು ಸೂಚನೆ ನೀಡಲಾಗಿದೆ. ಸೋಂಕು ಹರಡದಂತೆ ಗೈಡ್​​​ಲೈನ್​​ ಅನುಸರಿಸಲು ಸಲಹೆ ಕೊಡಲಾಗಿದೆ. 

ಸೋಂಕಿತ ವ್ಯಕ್ತಿಯ ಸಂಪರ್ಕಿತರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.ಮಂಕಿಪಾಕ್ಸ್ ರೋಗಲಕ್ಷಣ ಕಾಣಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ದೆಹಲಿಯ ನಿವಾಸಿಯಾಗಿರುವ ವ್ಯಕ್ತಿಯನ್ನು ಮೂರು ದಿನಗಳ ಹಿಂದೆ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ  ದಾಖಲಿಸಲಾಯಿತು. ಮಾದರಿಯನ್ನು ಶನಿವಾರ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಗೆ ಕಳುಹಿಸಲಾಗಿತ್ತು ವರದಿಯಲ್ಲಿ ಮಂಕಿ ಫಾಕ್ಸ್ ಪಾಸಿಟಿವ್ ಕಂಡು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ