ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ದೇಶದಲ್ಲಿ 5.25 ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ, ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

ದೇಶದಲ್ಲಿ ಕೊರೋನಾ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,279 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,38,88,755ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 24 Jul 2022, 12:49 pm

ನವದೆಹಲಿ: ದೇಶದಲ್ಲಿ ಕೊರೋನಾ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,279 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,38,88,755ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ 36 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ  ಒಟ್ಟಾರೇ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,26,033ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 2, 100 ಕೇಸ್ ಗಳು ಏರಿಕೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,52,200ಕ್ಕೆ ಏರಿಕೆಯಾಗಿದೆ.

Advertisement

Advertisement

 ಒಟ್ಟಾರೇ ಸೋಂಕಿತರಲ್ಲಿ ಶೇ. 0.35 ರಷ್ಟು ಸಕ್ರೀಯ ಪ್ರಕರಣಗಳಿದ್ದು, ಕೋವಿಡ್-19 ರಾಷ್ಟ್ರೀಯ ಸರಾಸರಿ ಚೇತರಿಕೆ ಪ್ರಮಾಣ ಶೇ. 98.45 ರಷ್ಟಿದೆ. ಇಲ್ಲಿವರೆಗೂ 2, 01, 99,33,45 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement