ದೇಶದಲ್ಲಿಂದು ಕೊರೋನಾಗೆ 41 ಬಲಿ, 16,866 ಹೊಸ ಪ್ರಕರಣ ಪತ್ತೆ
ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 16,866 ಹೊಸ ಪ್ರಕರಣ ಪತ್ತೆಯಾಗಿದೆ. 18,148 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ನವದೆಹಲಿ: ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 16,866 ಹೊಸ ಪ್ರಕರಣ ಪತ್ತೆಯಾಗಿದೆ. 18,148 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸದ್ಯ 1,50,877 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 7.03 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1,68,23,90 ಡೋಸ್ ಲಸಿಕೆ ನೀಡಲಾಗಿದ್ದು, ಒಟ್ಟಾರೇ 2,021, 766, 615 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.