ಮಲ್ಲಿಕಾರ್ಜನ ಖರ್ಗೆ 
ದೇಶ

ರಾಷ್ಟ್ರಪತಿಗಳ ಪ್ರಮಾಣ ವಚನ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ಅಗೌರವ: ರಾಜ್ಯಸಭಾ ಅಧ್ಯಕ್ಷರಿಗೆ ಕಾಂಗ್ರೆಸ್ ದೂರು

ರಾಷ್ಟ್ರಪತಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅನುಗುಣವಾಗಿ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷ ರಾಜ್ಯಸಭೆ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರಿಗೆ ಪತ್ರ...

ನವದೆಹಲಿ: ರಾಷ್ಟ್ರಪತಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅನುಗುಣವಾಗಿ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷ ರಾಜ್ಯಸಭೆ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದು ದೂರಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಷ್ಟ್ರಪತಿಗಳ ಪದಗ್ರಹಣ ಸಮಾರಂಭದಲ್ಲಿ ಅವರ ಸ್ಥಾನಕ್ಕೆ ಅನುಗುಣವಾದ ಜಾಗವನ್ನು ನೀಡಿರಲಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಅವರು “ಎಲ್ಲಾ ವಿರೋಧ ಪಕ್ಷಗಳು (ತೃಣಮೂಲ ಸೇರಿದಂತೆ) ಸಹಿ ಮಾಡಿದ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಅವರು ಹಿರಿಯ ನಾಯಕನಿಗೆ “ಉದ್ದೇಶಪೂರ್ವಕ ಅಗೌರವ” ತೋರಿಸಲಾಗಿದೆ ಎಂದು ದೂರಿದ್ದಾರೆ.

ಅತ್ಯಂತ ಹಿರಿಯ ನಾಯಕನಿಗೆ ತೋರಿದ ಈ ಉದ್ದೇಶಪೂರ್ವಕ ಅಗೌರವದ ಬಗ್ಗೆ ನಮ್ಮ ಆಘಾತ ಮತ್ತು ಪ್ರತಿಭಟನೆಯನ್ನು ವ್ಯಕ್ತಪಡಿಸಲು ನಾವು ಬರೆಯುತ್ತಿದ್ದೇವೆ. ಖರ್ಗೆ ಅವರಿಗೆ ನೀಡಬೇಕಾದ ಪ್ರೋಟೋಕಾಲ್ ಗೆ ಅನುಗುಣವಾಗಿ ಇರಲಿಲ್ಲ ಎಂದು ಕಾಂಗ್ರೆಸ್ ನಾಯಕ ಪತ್ರದಲ್ಲಿ ಬರೆದಿದ್ದಾರೆ.

ಇಂದು ಬೆಳಿಗ್ಗೆ ದ್ರೌಪತಿ ಮುರ್ಮು ಅವರು ರಾಷ್ಟ್ರಪತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನ ಸೆಂಟ್ರಲ್ ಹಾಲ್‌ನ ಮುಂದಿನ ಸಾಲಿನ ಎಡ ಮೂಲೆಯಲ್ಲಿ ಕುಳಿತಿದ್ದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೆಚ್ಚು ಪ್ರಮುಖ ಸ್ಥಾನಗಳನ್ನು ಹೊಂದಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ. ಇದು ಗೃಹ ಸಚಿವಾಲಯದಿಂದ ಉದ್ದೇಶಪೂರ್ವಕ ಅವಮಾನ ಎಂದು ಕಾಂಗ್ರೆಸ್ ಆರೋಪಿಸಿದೆ.

ಆರೋಪಕ್ಕೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಧಿಕಾರಿಗಳು ಖರ್ಗೆ ಅವರನ್ನು ಮುಂದಿನ ಸಾಲಿನಲ್ಲಿ ಕೂರಿಸಲಾಗಿತ್ತು. ಆದ್ದರಿಂದ ಯಾವುದೇ ಪ್ರೋಟೋಕಾಲ್ ಉಲ್ಲಂಘನೆಯಾಗಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT