ದೇಶ

ಸೋನಿಯಾ ಗಾಂಧಿ ನಾಳೆ ಎರಡನೇ ಸುತ್ತಿನ ಇಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ

Lingaraj Badiger

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಎರಡನೇ ಸುತ್ತಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ(ಇಡಿ) ಮುಂದೆ ಹಾಜರಾಗುವ ನಿರೀಕ್ಷೆಯಿದೆ.

ಇಡಿ ತನಿಖಾಧಿಕಾರಿಗಳು ಸೋನಿಯಾ ಗಾಂಧಿ ಅವರು ಹೇಳಿಕೆಯನ್ನು ದಾಖಲಿಸಿಕೊಳ್ಳಲು ಜುಲೈ 26 ರಂದು ಮಧ್ಯಾಹ್ನದ ಸುಮಾರಿಗೆ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ವಿಚಾರಣೆಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರಂಭದಲ್ಲಿ, ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೋನಿಯಾ ಗಾಂಧಿ ಅವರಿಗೆ ಸೂಚಿಸಿತ್ತು. ಆದರೆ ನಂತರ ಅದನ್ನು ಒಂದು ದಿನ ಮುಂದೂಡಲಾಯಿತು.

ಜುಲೈ ೨೧ ರಂದು ಸೋನಿಯಾ ಗಾಂಧಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ತನಿಖೆಯು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್-ಪ್ರಚಾರದ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದೆ.

SCROLL FOR NEXT