ನಿತೀಶ್ ಕುಮಾರ್ 
ದೇಶ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್‌‌ಗೆ ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್

ದೇಶದಲ್ಲಿ ಕೋವಿಡ್ ಹಗ್ಗಜಗ್ಗಾಟ ಮುಂದುವರಿದಿರುವ ಬೆನ್ನಲ್ಲೇ ಎರಡನೇ ಬಾರಿಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಅವರು ಸದ್ಯ ತಮ್ಮ ನಿವಾಸದಲ್ಲಿಯೇ ಪ್ರತ್ಯೇಕವಾಗಿದ್ದಾರೆ.

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಆಗಿದೆ ಮತ್ತು ವೈದ್ಯರ ಸಲಹೆಯ ಮೇರೆಗೆ ಅವರು ತಮ್ಮ ನಿವಾಸದಲ್ಲಿ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ಜನವರಿಯಲ್ಲಿ ಕೂಡ ನಿತೀಶ್ ಕುಮಾರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು ಎಂದು ಅವರು ತಿಳಿಸಿದ್ದಾರೆ.

ವೈದ್ಯರ ಸಲಹೆಯ ಮೇರೆಗೆ ಅವರು ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಅವರು ಆರೋಗ್ಯವಾಗಿರಲಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಪ್ರಕಟಣೆ ತಿಳಿಸಿದೆ.

ಕಳೆದ ಎರಡು ಮೂರು ದಿನಗಳಲ್ಲಿ ತನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಸೋಮವಾರ ದೆಹಲಿಯಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿತೀಶ್ ಕುಮಾರ್ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯದ ಕಾರಣದಿಂದಾಗಿ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ದೇಶದಲ್ಲಿಂದು ಕಳೆದ 24 ಗಂಟೆಗಳ ಅವಧಿಯಲ್ಲಿ 14, 830 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 36 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 5, 26,110ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT