ದೇಶ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ, ಎರಡನೇ ಬಾರಿಗೆ ವಿಚಾರಣೆ, ಇಡಿ ಕಚೇರಿಗೆ ಸೋನಿಯಾ ಗಾಂಧಿ ಆಗಮನ

Nagaraja AB

ನವದೆಹಲಿ: ನ್ಯಾಷನಲ್ ಹೆರಾಲ್ಡ್  ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಸೋನಿಯಾ ಗಾಂಧಿ ಆಗಮಿಸಿದರು. ಸೋನಿಯಾ ಗಾಂಧಿ ತನಿಖೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಕಾಂಗ್ರೆಸ್ ಕೇಂದ್ರ  ಕಚೇರಿ ಸುತ್ತಮುತ್ತ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡಾ ತನ್ನ ತಾಯಿ ಜೊತೆಗಿದ್ದರು.

SCROLL FOR NEXT