ದೇಶ

ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯಗೆ ಇಡಿ ಸಮನ್ಸ್

Lingaraj Badiger

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ನಾಡಿಯಾ ಜಿಲ್ಲೆಯ ಶಾಸಕ ಮತ್ತು ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷರಾಗಿರುವ ಭಟ್ಟಾಚಾರ್ಯ ಅವರಿಗೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಸಿಜಿಒ ಕಾಂಪ್ಲೆಕ್ಸ್‌ನಲ್ಲಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಇತರರ ಮನೆಗಳ ಮೇಲೆ ಜುಲೈ 22 ರಂದು ಇಡಿ ದಾಳಿ ನಡೆಸಿದ ವೇಳೆ ಭಟ್ಟಾಚಾರ್ಯ ಅವರ ವಸತಿ ಆವರಣದಲ್ಲೂ ಶೋಧ ಕಾರ್ಯಾಚರಣೆ ನಡೆಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾಗಿರುವ ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ರಾಜ್ಯ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರು ಇಡಿ ಕಸ್ಟಡಿಯಲ್ಲಿದ್ದಾರೆ.

SCROLL FOR NEXT