ದೇಶ

ನವದೆಹಲಿ: ಎರಡನೇ ಬಾರಿಗೆ ಸೋನಿಯಾ ಗಾಂಧಿ ಇಡಿ ವಿಚಾರಣೆ, ಕಾಂಗ್ರೆಸ್ ಕಚೇರಿ ಬಳಿ ಬಿಗಿ ಭದ್ರತೆ

Nagaraja AB

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ.

ಸೋನಿಯಾ ಗಾಂಧಿ ಇಡಿ ತನಿಖೆ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ. ಮಹಾತ್ಮ ಗಾಂಧಿ ಅವರ ಸಮಾಧಿ ರಾಜ್ ಘಾಟ್ ಬಳಿ ಸತ್ಯಾಗ್ರಹ ನಡೆಸಲು ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಮತ್ತು ಆ ಪ್ರದೇಶದ ಸುತ್ತಮುತ್ತ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಕೇಂದ್ರ ಕಚೇರಿಗಳ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಸದರ ಸಭೆಯಲ್ಲಿ ನಿರ್ಧರಿಸಲಾಗಿದೆ ಈ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ರಾಜ್ ಘಾಟ್ ಬಳಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ನಿರಾಕರಿಸುವುದು ದುರಾದೃಷ್ಟಕರ ಮತ್ತು ಖಂಡನಾರ್ಹವಾಗಿದೆ. ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ.  ಗುರುವಾರ ಮೊದಲ ಬಾರಿಗೆ ಇಡಿ ಮುಂದೆ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾದಾಗಲೂ  ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸಿದ್ದರು. 

SCROLL FOR NEXT