ಕೇಂದ್ರ ಸಚಿವ ನಿತ್ಯಾನಂದ ರೈ 
ದೇಶ

ಅಗ್ನಿವೀರರಿಗೆ ಶೇ. 10 ರಷ್ಟು ಮೀಸಲಾತಿ ಸುಪ್ರೀಂನ ಶೇ. 50 ರ ಮಿತಿ ಮೇಲೆ ಪರಿಣಾಮ ಬೀರುವುದಿಲ್ಲ: ಕೇಂದ್ರ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಕಾನ್‌ಸ್ಟೆಬಲ್‌ ನೇಮಕಾತಿಯಲ್ಲಿ ಅಗ್ನಿವೀರರಿಗೆ ನೀಡಲಾಗುವ ಶೇ. 10 ರಷ್ಟು ಮೀಸಲಾತಿಯು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. 50 ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ...

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಕಾನ್‌ಸ್ಟೆಬಲ್‌ ನೇಮಕಾತಿಯಲ್ಲಿ ಅಗ್ನಿವೀರರಿಗೆ ನೀಡಲಾಗುವ ಶೇ. 10 ರಷ್ಟು ಮೀಸಲಾತಿಯು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. 50 ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ಮೀಸಲಾತಿ ಪ್ರಮಾಣ ಶೇ. 50 ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಸಂಬಂದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, "ಕಾನ್ಸ್‌ಟೇಬಲ್(ಜನರಲ್ ಡ್ಯೂಟಿ), ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ರೈಫಲ್‌ಮ್ಯಾನ್ ಮತ್ತು ಅಸ್ಸಾಂ ರೈಫಲ್ಸ್‌ನ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ. 10 ರಷ್ಟು ಮೀಸಲಾತಿಗೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಮೀಸಲಾತಿಯು ಸಮತಲವಾಗಿರುತ್ತದೆ. ಇದು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. 50 ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು.

ಮಾಜಿ ಅಗ್ನಿವೀರರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು ಎಂದು ರೈ ಹೇಳಿದರು.

ಜೂನ್ 14 ರಂದು ಕೇಂದ್ರ ಸರ್ಕಾರ 17 ರಿಂದ 21 ವರ್ಷ ವಯಸ್ಸಿನ ಯುವಕರನ್ನು ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ನಾಲ್ಕು ವರ್ಷಗಳ ಅಲ್ಪಾವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಗೆ ಚಾಲನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT