ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಶಾಸಕನ ಪುತ್ರ ಸೇರಿ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಬಾಲಾ ನ್ಯಾಯ ಮಂಡಳಿ ಬುಧವಾರ ಜಾಮೀನು ಮಂಜೂರು ಮಾಡಿದೆ.

ಹೈದರಾಬಾದ್: ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಬಾಲಾ ನ್ಯಾಯ ಮಂಡಳಿ ಬುಧವಾರ ಜಾಮೀನು ಮಂಜೂರು ಮಾಡಿದೆ.

ಜೂನ್ ಮೊದಲ ವಾರದಿಂದ ಬಾಲಾಗೃಹದಲ್ಲಿರುವ ಶಾಸಕನ ಪುತ್ರ ಸೇರಿ ನಾಲ್ವರಿಗೆ ಜಾಮೀನು ನೀಡಲಾಗಿದೆ. ಜಾಮೀನಿನ ಮೇಲೆ ಹೊರ ಬಂದಿರುವ ಅಪ್ರಾಪ್ತರು ಪ್ರತಿ ತಿಂಗಳ ಮೊದಲ ಸೋಮವಾರ ಜಿಲ್ಲಾ ಪರೀಕ್ಷಾಧಿಕಾರಿಗಳ ಮುಂದೆ ಹಾಜರು ಇರಬೇಕು ಎಂದು ತನಿಖಾ ಅಧಿಕಾರಿಗಳಿಗೆ ಷರತ್ತು ವಿಧಿಸಿದೆ.

ಈ ಪ್ರಕರಣದಲ್ಲಿ ಬಂಧಿತರಾಗಿರುವ ಐದನೇ ಅಪ್ರಾಪ್ತ ಜಾಮೀನು ಸಂಬಂಧ ತೆಲಂಗಾಣ ಹೈಕೋರ್ಟ್‌ಗೆ ಮೊರೆ ಹೋಗಿರುವುದರಿಂದ ಬಾಲಾಪರಾಧಿ ಗೃಹದಲ್ಲಿಯೇ ಇರಲಿದ್ದಾನೆ ಮತ್ತು ಏಕೈಕ ವಯಸ್ಕ ಆರೋಪಿ ಸದುದ್ದೀನ್ ಮಲ್ಲಿಕ್ ಜೈಲಿನಲ್ಲಿರಲಿದ್ದಾನೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಕಾರಿನಲ್ಲಿ 17 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿತ್ತು. ರಾಜಕೀಯವಾಗಿ ಪ್ರಭಾವಿತರ ಮಕ್ಕಳಾದ 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಪಬ್ ನಲ್ಲಿ ಪಾರ್ಟಿ ಮುಗಿಸಿ ಐವರು ಯುವಕರೊಂದಿಗೆ ಕಾರಿನಲ್ಲಿ ಬಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT