ಮಿಗ್​​-21 ಲಘು ವಿಮಾನ ಪತನ 
ದೇಶ

ರಾಜಸ್ಥಾನ: ಮಿಗ್​​-21 ಲಘು ವಿಮಾನ ಪತನ, ಇಬ್ಬರು ಪೈಲಟ್​ಗಳ​ ಸಾವು

ರಾಜಸ್ಥಾನದಲ್ಲಿ ಭಾರತೀಯ ವಾಯುಸೇನೆಯ ಮಿಗ್​​-21 ಲಘು ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜೈಪುರ: ರಾಜಸ್ಥಾನದಲ್ಲಿ ಭಾರತೀಯ ವಾಯುಸೇನೆಯ ಮಿಗ್​​-21 ಲಘು ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ಥಾನದ ಬಾರ್ಮರ್ ಬಳಿ ಭಾರತೀಯ ವಾಯುಸೇನೆಗೆ ಸೇರಿದ ಮಿಗ್​-21 ಜೆಟ್ ವಿಮಾನ ಪತಗೊಂಡಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದಾರೆ. ಈ ಐಎಎಫ್ ವಿಮಾನವು ಬೇಟೂನ ಭೀಮಡಾ ಗ್ರಾಮದ ಬಳಿ ಪತನಗೊಂಡಿದೆ” ಎಂದು ಬಾರ್ಮರ್ ಜಿಲ್ಲಾಧಿಕಾರಿ ಲೋಕ್ ಬಂಡು ಪಿಟಿಐಗೆ ತಿಳಿಸಿದ್ದಾರೆ.

ಉತ್ತರಲೈ ವಾಯುನೆಲೆಯಿಂದ ಟೇಕಾಫ್ ಆಗಿದ್ದ ಅವಳಿ ಆಸನದ MiG-21 ತರಬೇತುದಾರ ರಾತ್ರಿ 9.10 ರ ಸುಮಾರಿಗೆ ರಾತ್ರಿ ಹಾರಾಟದ ಸಮಯದಲ್ಲಿ ಭೀಮಡಾ ಗ್ರಾಮದ ಬಳಿ ಅಪಘಾತಕ್ಕೀಡಾಯಿತು. ಇಬ್ಬರೂ ಪೈಲಟ್‌ಗಳಿಗೆ ಮಾರಣಾಂತಿಕ ಗಾಯಗಳಾಗಿ ಅವರು ಸಾವನ್ನಪ್ಪಿದ್ದಾರೆ.  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರೊಂದಿಗೆ ಅಪಘಾತದ ಬಗ್ಗೆ ವಿಚಾರಿಸಿದ್ದು, ಅಪಘಾತದ ಹಿಂದಿನ ನಿಖರವಾದ ಕಾರಣದ ಕುರಿತು ಐಎಎಫ್ ತನಿಖಾ ಕೋರ್ಟ್ ಗೆ ಆದೇಶಿಸಿದ್ದಾರೆ. 

ಇದನ್ನೂ ಓದಿ: ಮಿಗ್ -21 ವಿಮಾನ ಪತನ: ಐಎಎಫ್ ಪೈಲಟ್ ಕ್ಯಾಪ್ಟನ್ ಎ ಗುಪ್ತಾ ದುರ್ಮರಣ
 
2021 ರಲ್ಲಿ, ಐದು ಮಿಗ್ -21 ಗಳು ಭಾರತದಲ್ಲಿ ಪತನಗೊಂಡಿದ್ದವು. ಇದರ ಪರಿಣಾಮವಾಗಿ ಮೂವರು ಪೈಲಟ್‌ಗಳು ಸಾವನ್ನಪ್ಪಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಐಎಎಫ್ ಪೈಲಟ್, ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಅವರು ಮಿಗ್ -21 ಯುದ್ಧ ವಿಮಾನವು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತರಬೇತಿಯ ಸಮಯದಲ್ಲಿ ಪತನಗೊಂಡ ದುರ್ಘಟನೆಯಲ್ಲಿ ಸಾವನ್ನಪ್ಪಿದರು.

ಒಟ್ಟಾರೆಯಾಗಿ, ಕಳೆದ ಐದು ವರ್ಷಗಳಲ್ಲಿ ಸಶಸ್ತ್ರ ಪಡೆಗಳಲ್ಲಿ 46 ವಿಮಾನಗಳು ಮತ್ತು ಹೆಲಿಕಾಪ್ಟರ್ ಅಪಘಾತಗಳಲ್ಲಿ ಕನಿಷ್ಠ 44 ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಳೆಯ ಸೋವಿಯತ್ ಮೂಲದ MiG-21s, 1963 ರಲ್ಲಿ IAF ನಿಂದ ಸೇರ್ಪಡೆಗೊಂಡ ಮೊದಲ ನಿಜವಾದ ಸೂಪರ್ಸಾನಿಕ್ ಯುದ್ಧವಿಮಾನಗಳು, ನಿರ್ದಿಷ್ಟವಾಗಿ ವರ್ಷಗಳಲ್ಲಿ ಹೆಚ್ಚಿನ ಪತನ ಪ್ರಮಾಣ ದರ ಹೊಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT