ಪ್ರಲ್ಹಾದ್ ಜೋಶಿ 
ದೇಶ

ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ನವದೆಹಲಿ: ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್‌ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪಿಎಫ್ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.

ಈ ಹಿಂದೆ, ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಪಿಎಫ್ಐ, ಎಸ್‌ಡಿಪಿಐ ಸಂಘಟನೆಯವರು ಇಂತಹ ಕೃತ್ಯದ ಹಿಂದಿದ್ದಾರೆ. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂತಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದರು.

ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸಿದ್ದಾರೆ. ಪಿಎಫ್ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚಿಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT