ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ 20,557 ಹೊಸ ಪ್ರಕರಣ ಪತ್ತೆ, 44 ಮಂದಿ ಸಾವು

ದೇಶದಲ್ಲಿಂದು ಕಳೆದ 24 ಗಂಟೆಗಳ ಅವಧಿಯಲ್ಲಿ 20,557 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,39,59,321ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳು ಕೂಡ ಜಾಸ್ತಿಯಾಗಿವೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 20,557 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,39,59,321ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳು ಕೂಡ ಜಾಸ್ತಿಯಾಗಿದ್ದು, 1,46,323ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಇಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 44 ಜನರು ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 5,26,211ಕ್ಕೆ ಏರಿಕೆಯಾಗಿದೆ. ಒಟ್ಟು 4,32,86,787 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸಚಿವಾಲಯದ ಪ್ರಕಾರ, ಲಸಿಕಾ ಅಭಿಯಾನದ ಅಡಿಯಲ್ಲಿ ದೇಶದಾದ್ಯಂತ ಈವರೆಗೆ 203.21 ಕೋಟಿ ಕೋವಿಡ್ ಲಸಿಕೆ ಡೋಸ್‌‌ಗಳನ್ನು ನೀಡಲಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 5.18ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 4.71ರಷ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT