ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

ನವದೆಹಲಿ:  ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

ಕೇಜ್ರಿವಾಲ್ ಅವರ ವಿದೇಶ ಪ್ರವಾಸ ರದ್ಧತಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ದೆಹಲಿ ಸರ್ಕಾರ ಔಪಚಾರಿಕ ಹೇಳಿಕೆ ನೀಡಿದೆ. ಆಗಸ್ಟ್ ಮೊದಲ ವಾರದಲ್ಲಿ ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಕೇಜ್ರಿವಾಲ್ ಅವರನ್ನು ಆಹ್ವಾನಿಸಲಾಗಿತ್ತು.

ಜುಲೈ 20 ರೊಳಗೆ ಸಿಂಗಾಪುರ್ ಭೇಟಿಯ ಔಪಚಾರಿಕ ಕಾರ್ಯಗಳು ಪೂರ್ಣಗೊಂಡಿದ್ದು, ಜುಲೈ 21 ರಂದು ಲೆಫ್ಟಿನೆಂಟ್ ಗವರ್ನರ್ ಕಡತವನ್ನು ಹಿಂದಿರುಗಿಸಿದ್ದಾರೆ. ಎಲ್‌ಜಿ ಮತ್ತು ಕೇಂದ್ರದಿಂದ ಅಗತ್ಯ ಅನುಮತಿ ಪಡೆಯಲು ಬಹಳ ಸಮಯ ತೆಗೆದುಕೊಂಡಿದ್ದರಿಂದ, ಉಳಿದ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಸಮಯ ಆಗಿಲ್ಲ ಎಂದು ಎಎಪಿ ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!