ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಇಂದು 20,409 ಹೊಸ ಪ್ರಕರಣ, 32 ಸಾವು

ದೇಶದಲ್ಲಿಂದು 20,409 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 20,409 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,39,79,730ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,43,988 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಶುಕ್ರವಾರ ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 32 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಈವರೆಗೂ 5,26,258 ಜನರು ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.33ರಷ್ಟು ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ದರವು ಶೇ 98.48ರಷ್ಟಿದೆ. ದೈನಂದಿನ ಪಾಸಿಟಿವಿಡಿ ದರವು ಶೇ 5.12ರಷ್ಟಿದ್ದರೆ, ಮರಣ ಪ್ರಮಾಣ ಶೇ 1.20ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ಈವರೆಗೂ 203.60 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್