ಸಾಂದರ್ಭಿಕ ಚಿತ್ರ 
ದೇಶ

ಕೆಲಸಕ್ಕಿದ್ದ ಮನೆಯಲ್ಲಿ ಕನ್ನ: 10 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿ ಬಂಧನ

ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಮನೆಕೆಲಸದಾತ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ  8 ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದಿದ್ದಾನೆ.

ನವದೆಹಲಿ: ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಮನೆಕೆಲಸದಾತ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ  8 ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದಿದ್ದಾನೆ. ಕಳ್ಳತನದ ಆರೋಪದ ಮೇಲೆ ಪೊಲೀಸರು ಮನೆಗೆಲಸದಾತ ಮತ್ತು ಆತನ ಸಂಬಂಧಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಬಿಹಾರ ನಿವಾಸಿ ಮೋಹನ್ ಕುಮಾರ್ (26) ಎಂದು ಗುರುತಿಸಲಾಗಿದೆ. ವಯಸ್ಸು ದೃಢೀಕರಣದ ಅವಶ್ಯಕತೆಗಳ ಕಾರಣದಿಂದಾಗಿ ಕುಮಾರ್ ಅವರ ಸಂಬಂಧಿಯನ್ನು ಬಾಲ ನ್ಯಾಯ ಮಂಡಳಿ (ಜೆಜೆಬಿ) ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಜುಲೈ 4 ರಂದು ಮನೆಯ ಯಜಮಾನ ತಮ್ಮ ಕುಟುಂಬ ಸದಸ್ಯರೊಂದಿಗೆ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುಎಸ್‌ಗೆ ತೆರಳಿದ್ದರು . ಕಳೆದ ಐದು ವರ್ಷಗಳಿಂದ ಸೇವಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್ ಗೆ ಮನೆಯೊಡೆಯ ಮನೆಯ ಕೀಲಿಕೈಗಳನ್ನು ನೀಡಿದ್ದರು. ಆದರೆ ಜುಲೈ 18 ರಂದು ಕುಮಾರ್ ಮನೆಯಲ್ಲಿ ಕಳ್ಳತನ ಮಾಡಿ ಸುಮಾರು 8-10 ಕೋಟಿ ರೂ. ಮೌಲ್ಯದ ಕಾರು, ನಗದು ಮತ್ತು ಚಿನ್ನಾಭರಣಗಳನ್ನು ಕಳವು ಮಾಡಿದ್ದ.

ತನಿಖೆ ವೇಳೆ ಪೊಲೀಸರು ಆ ಪ್ರದೇಶದಲ್ಲಿನ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಆರೋಪಿಯು ಕಾರಿನಲ್ಲಿ ಸೂಟ್‌ಕೇಸ್ ಸಾಗಿಸುತ್ತಿರುವುದು ಕಂಡು ಬಂದಿದೆ.ಬಂಧಿತರಿಂದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ  5,04,900 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳಿದ ಚಿನ್ನಾಭರಣ ಹಾಗೂ ನಗದನ್ನು ಪತ್ತೆ ಹಚ್ಚುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT