ಸಾಂದರ್ಭಿಕ ಚಿತ್ರ 
ದೇಶ

ಕೇರಳ: ದೇಶದ ಮೊದಲ 'ಮಂಕಿಪಾಕ್ಸ್' ರೋಗಿ ಗುಣಮುಖ

ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್  ಕಾಯಿಲೆ ಕಾಣಿಸಿಕೊಂಡು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.

ತಿರುವನಂತಪುರಂ: ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು, ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.

ಕೊಲ್ಲಂನಿಂದ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದ್ದರಿಂದ  ರಾಷ್ಟ್ರೀಯ ವೈರಾಣು ಸಂಸ್ಥೆ ಸೂಚನೆಯಂತೆ 72 ಗಂಟೆಯಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಎರಡು ಬಾರಿಯೂ ಎಲ್ಲಾ ಸ್ಯಾಂಪಲ್ ಗಳಲ್ಲಿ ನೆಗೆಟಿವ್ ವರದಿಯಾಗಿದೆ. ರೋಗಿ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ಮೇಲಿನ ದುದ್ದುಗಳು ಸಂಪೂರ್ಣವಾಗಿ ಗುಣಮುಖವಾಗಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಆತನ ಕುಟುಂಬ ಸದಸ್ಯರ ಸ್ಯಾಂಪಲ್ ಪರೀಕ್ಷೆ ಫಲಿತಾಂಶದಲ್ಲೂ ನೆಗೆಟಿವ್ ವರದಿಯಾಗಿದೆ.  ಪ್ರಸ್ತುತ ಪಾಸಿಟಿವ್ ಕಾಣಿಸಿಕೊಂಡಿದ್ದ ಇತರ ಇಬ್ಬರ ಆರೋಗ್ಯವೂ ಸುಧಾರಿಸಿದೆ. ಇದೇ ರೀತಿಯಲ್ಲಿ ರೋಗ ತಡೆ ಕ್ರಮಗಳು ಮುಂದುವರೆಯಲಿವೆ ಎಂದು  ಸಚಿವರು ಹೇಳಿದ್ದಾರೆ. ವಿದೇಶದಿಂದ ಕೇರಳಕ್ಕೆ ಮರಳಿದ್ದ ಕೊಲ್ಲಂ ನಿವಾಸಿಗೆ ಜುಲೈ 14 ರಂದು ಮಂಕಿಪಾಕ್ಸ್ ಲಕ್ಷಣಗಳು ಹಾಗೂ ಪಾಸಿಟಿವ್  ಕಂಡುಬಂದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

SCROLL FOR NEXT