ದೇಶ

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ

Sumana Upadhyaya

ಬಾರಾಮುಲ್ಲಾ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಾಲಾ ಪ್ರದೇಶದ ವಾನಿಗಮ್ ನಲ್ಲಿ ಆರಂಭವಾದ ಎನ್ ಕೌಂಟರ್ ನಲ್ಲಿ ಇಂದು ಶನಿವಾರ ಓರ್ವ ಉಗ್ರ ಹತನಾಗಿದ್ದಾನೆ. ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ. 

ಇದುವರೆಗಿನ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದು ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಪ್ರದೇಶವನ್ನು ಸುತ್ತುವರಿದ ನಂತರ ಎನ್‌ಕೌಂಟರ್ ನಡೆದಿದೆ ಎಂದು ನಂಬಲಾಗಿದೆ.

SCROLL FOR NEXT