ಕೋವಿಡ್-19 ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಇಂದು 19,673 ಹೊಸ ಸೋಂಕು ಪ್ರಕರಣಗಳು ವರದಿ

ದೇಶದಲ್ಲಿ ಕೋವಿಡ್-19 ಸೋಂಕು ಪ್ರಸರಣ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕು ಪ್ರಸರಣ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, 19, 336 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟಾರೆ ಗುಣಮುಖರ ಪ್ರಮಾಣ 4, 33, 49, 778ಕ್ಕೇರಿಕೆಯಾಗಿದೆ.

ದೈನಂದಿನ ಸೋಂಕು ಸಕಾರಾತ್ಮಕ ದರ ಶೇ.4.96ರಷ್ಟಿದ್ದು, ವಾರದ ಸೋಂಕು ಸಕಾರಾತ್ಮಕ ದರ 4.88ರಷ್ಟಿದೆ. ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.33ರಷ್ಟು ಅಂದರೆ 1, 43, 676ರಷ್ಟಿದೆ. ಇದೇ ಅವಧಿಯಲ್ಲಿ 39 ಕೋವಿಡ್ ಸಾವುಗಳು ದಾಖಲಾಗಿದ್ದು, ಭಾರತದ ಒಟ್ಟಾರೆ COVID-19 ಸಾವಿನ ಸಂಖ್ಯೆ 5,26,357 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3, 96, 424 ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಆ ಮೂಲಕ ಒಟ್ಟಾರೆ ಪರೀಕ್ಷೆ ಪ್ರಮಾಣ 87, 52, 07, 621ಕ್ಕೆ ಏರಿಕೆಯಾಗಿದೆ. ಅಂತೆಯೇ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 31, 36, 029 ಡೋಸ್ ಲಸಿಕೆ ವಿತರಣೆ ಮಾಡಲಾಗಿದ್ದು, ಒಟ್ಟಾರೆ ಕೋವಿಡ್ ಲಸಿಕೆ ವಿತರಣೆ ಪ್ರಮಾಣ 204.25 ಕೋಟಿ ಡೋಸ್ ಗಳಿಗೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT