ಸಂಜಯ್ ರಾವತ್ 
ದೇಶ

ಪತ್ರಾ ಚಾಲ್ ಭೂ ಹಗರಣ: ಸಂಸದ ಸಂಜಯ್ ರಾವತ್ ರನ್ನು ವಶಕ್ಕೆ ಪಡೆದ ಇಡಿ

ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 

ನವದೆಹಲಿ: ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 

ರಾವತ್ ನಿವಾಸದ ಮೇಲೆ ದಾಳಿ ನಡೆಸಿದ ಗಂಟೆಗಳ ನಂತರ ಇಡಿ ಅವರನ್ನು ವಶಕ್ಕೆ ಪಡೆದಿದೆ. 1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಈ ಹಿಂದೆ ಎರಡು ಬಾರಿ ವಿಚಾರಣೆ ನಡೆಸಲಾಗಿತ್ತು.

ಜುಲೈ 1ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಇಡಿ ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‍ಎ) ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ದಾಖಲಿಸಿಕೊಂಡಿತ್ತು. 

ಕಳೆದ ಏಪ್ರಿಲ್‍ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ಜಾರಿ ನಿರ್ದೇಶನಾಲಯದ (ಇ.ಡಿ) ತಂಡವು ಇಂದು ಬೆಳಗ್ಗೆ ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನಿವಾಸದಲ್ಲಿ ಶೋಧ ಕಾರ್ಯ ಕೈಗೊಂಡಿದೆ. ಮುಂಬೈನ 'ಪತ್ರಾ ಚಾಲ್' ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್ ಅವರನ್ನು ಇ.ಡಿ ತನಿಖೆ ನಡೆಸುತ್ತಿದೆ.

ಸಂಜಯ್ ರಾವತ್ ರನ್ನು ಇಡಿ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾವತ್ ನಿವಾಸದ ಎದುರು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!