ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ತಂದೆ-ಮಗನಿಗೆ 20 ವರ್ಷ ಜೈಲು ಶಿಕ್ಷೆ

ರಾಜಸ್ಥಾನದ ಕೋಟಾದಲ್ಲಿ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆ ಮೇಲೆ ಅತ್ಯಾಚಾರ ಎಸಗಿದ 24 ವರ್ಷದ ಯುವಕ ಮತ್ತು ಆತನ ತಂದೆಗೆ ಪೋಕ್ಸೊ ನ್ಯಾಯಾಲಯ ಶನಿವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆ ಮೇಲೆ ಅತ್ಯಾಚಾರ ಎಸಗಿದ 24 ವರ್ಷದ ಯುವಕ ಮತ್ತು ಆತನ ತಂದೆಗೆ ಪೋಕ್ಸೊ ನ್ಯಾಯಾಲಯ ಶನಿವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ದೀಪಕ್ ದುಬೆ ಅವರು, ಭಾರತೀಯ ದಂಡ ಸಂಹಿತೆ(ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ತಂದೆ-ಮಗ ಅಪಹರಣ ಮತ್ತು ಅತ್ಯಾಚಾರದ ಪ್ರಕರಣದ ಅಪರಾಧಿಗಳು ಎಂದು ಘೋಷಿಸಿದರು ಮತ್ತು ಅವರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 30,000 ರೂ. ದಂಡ ವಿಧಿಸಿದ್ದಾರೆ.

ಅಪರಾಧಿಯು ಅಪ್ರಾಪ್ತ ಬಾಲಕಿಯ ಸೋದರಸಂಬಂಧಿಯಾಗಿದ್ದು, ಅಪರಾಧದ ಸಮಯದಲ್ಲಿ ಬಾಲಕಿಗೆ 13 ವರ್ಷ ವಯಸ್ಸಾಗಿತ್ತು.

ಕೃತ್ಯ ಎಸಗಲು ಸಹಕರಿಸಿದ ಯುವಕನ 56 ವರ್ಷದ ತಂದೆಗೂ ಕೋರ್ಟ್ ಶಿಕ್ಷೆ ವಿಧಿಸಿದ್ದು, 20 ಸಾವಿರ ರೂಪಾಯಿ ದಂಡ ಕಟ್ಟಲು ನ್ಯಾಯಾಲಯ ಆದೇಶಿಸಿದೆ ಎಂದು ಸರ್ಕಾರಿ ವಕೀಲ ಲಲಿತ್ ಶರ್ಮಾ ಅವರು ಹೇಳಿದ್ದಾರೆ.

ಪುರುಷ ವೈದ್ಯ ಮೊಹಮ್ಮದ್ ಪರ್ವೇಜ್ ಖಾನ್ ಅವರು ಬಾಲಕೀಯ ವೈದ್ಯಕೀಯ ಪರೀಕ್ಷೆ ನಡೆಸಿದ್ದನ್ನು ನ್ಯಾಯಾಧೀಶರು ಗಂಭೀರವಾಗಿ ಪರಿಗಣಿಸಿದ್ದು,  ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ನಿರ್ದೇಶಕರಿಗೆ ಆದೇಶಿಸಿದ್ದಾರೆ ಎಂದು ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!