ಮನ್ ಕಿ ಬಾತ್ ನಲ್ಲಿ ಮಧುಕೇಶ್ವರ ಹೆಗಡೆ ಬಗ್ಗೆ ಪ್ರಸ್ತಾಪ 
ದೇಶ

ಕರ್ನಾಟಕದ ಎರಡು ವಿಷಯಗಳನ್ನು ವಿಶೇಷವಾಗಿ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಏನದು?

ಪ್ರಧಾನಿ ನರೇಂದ್ರ ಮೋದಿ ಇಂದು ಜುಲೈ 31ರಂದು ಮನ್ ಕಿ ಬಾತ್ ನಲ್ಲಿ ಕರ್ನಾಟಕದ ಬಗ್ಗೆ ವಿಶೇಷವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಜುಲೈ 31ರಂದು ಮನ್ ಕಿ ಬಾತ್ ನಲ್ಲಿ ಕರ್ನಾಟಕದ ಬಗ್ಗೆ ವಿಶೇಷವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಅಮೃತಭಾರತಿಗೆಕನ್ನಡದಾರತಿ ಕಾರ್ಯಕ್ರಮವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಪ್ರಧಾನಿ ಅವರ ಈ ಶ್ಲಾಘನೆ ನಮ್ಮ ಉತ್ಸಾಹವನ್ನು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 75 ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಕರ್ನಾಟಕದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿರುವುದು ಮಾತ್ರವಲ್ಲದೆ ಸ್ಥಳೀಯ ಸಂಸ್ಕೃತಿ, ಕಲೆ, ಸಾಹಿತ್ಯಕ್ಕೂ ಒತ್ತು ನೀಡಿರುವುದು ಪ್ರಶಂಸನೀಯ ಎಂದು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಜೇನು ಸಾಕಣೆಯಲ್ಲಿ ಸಾಧನೆ: ಜೇನು ಸಾಕಣೆ ಕರಾವಳಿ, ಮಲೆನಾಡು, ಉತ್ತರ ಕನ್ನಡ ಭಾಗದ ಹಲವು ಕೃಷಿಕರ ವಿಶೇಷ ಹವ್ಯಾಸವಾಗಿದೆ. ಜೇನು ಸಾಕಣೆಯಲ್ಲಿ ಸಾಧನೆ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮಧುಕೇಶ್ವರ ಹೆಗಡೆ ಅವರನ್ನು ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಮಧುಕೇಶ್ವರ ಹೆಗಡೆ ಅವರು ಕೇಂದ್ರ ಸರ್ಕಾರದ ಸಬ್ಸಿಡಿ ಪಡೆದು 50 ಪೆಟ್ಟಿಗೆ ಜೇನು ಹುಳಗಳ ಸಾಕಾಣಿಕೆ ಪ್ರಾರಂಭಿಸಿದರು. ಇಂದು 800ಕ್ಕೂ ಹೆಚ್ಚು ಪೆಟ್ಟಿಗೆಗಳು ಅವರ ಬಳಿ ಇವೆ. ಮಧು ಅಂದರೆ ಜೇನು ಕೆಲಸದಲ್ಲಿ ಕೆಲಸದಲ್ಲಿ ಹಲವು ಆವಿಷ್ಕಾರಗಳನ್ನು ಮಾಡಿ ತಮ್ಮ ಹೆಸರನ್ನು ಸಾರ್ಥಕಗೊಳಿಸಿದ್ದಾರೆ ಎಂದು ಮೋದಿ ಮನ್ ಕಿ ಬಾತ್ ನಲ್ಲಿ ಪ್ರಶಂಸಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT