ಕೆಟಿ ರಾಮ ರಾವ್ 
ದೇಶ

ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮುಖಂಡರ ಮೇಲೆ ಎಷ್ಟು ಇಡಿ, ಐಟಿ ದಾಳಿ ನಡೆದಿದೆ: ಕೆಟಿ ರಾಮ ರಾವ್

ಕೇಂದ್ರಿಯ ತನಿಖಾ ಸಂಸ್ಥೆಗಳ ಪಾರದರ್ಶಕತೆಯನ್ನು ಟಿಆರ್ ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮ ರಾವ್ ಪ್ರಶ್ನಿಸಿದ್ದಾರೆ.

ಹೈದ್ರಾಬಾದ್: ಕೇಂದ್ರಿಯ ತನಿಖಾ ಸಂಸ್ಥೆಗಳ ಪಾರದರ್ಶಕತೆಯನ್ನು ಟಿಆರ್ ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮ ರಾವ್ ಪ್ರಶ್ನಿಸಿದ್ದಾರೆ. ಡಿಎಂಕೆ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಅವರ ಸಂಬಂಧಿಕರ ನಿವಾಸ ಹಾಗೂ ಕಚೇರಿಗಳ ಮೇಲೆ ಎಷ್ಟು ಇಡಿ, ಐಟಿ, ಸಿಬಿಐ ದಾಳಿ ನಡೆದಿದೆ ಎಂದು ಅವರು ಕೇಳಿದ್ದಾರೆ.

ಈ ಕುರಿತು ಶನಿವಾರ ಅವರು ಟ್ವೀಟ್ ಮಾಡಿದ್ದು, ಎಲ್ಲಾ ಬಿಜೆಪಿಯ ಸಂಬಂಧಿಕರು ಸತ್ಯ ಹರಿಶ್ಚಂದ್ರರಾ? ಎಂದು ಪ್ರಶ್ನಿಸಿದ್ದಾರೆ. 

ಅನೇಕ ತಿಂಗಳುಗಳಿಂದ ಬಿಜೆಪಿ ಹಾಗೂ ಟಿಆರ್ ಎಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಗೆ ಸನ್ನಿಹದಲ್ಲಿರುವಂತೆಯೇ ಉಭಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪ, ವಾಗ್ವಾದಗಳು ಮತ್ತಷ್ಟು ಹೆಚ್ಚಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!